ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಕೋರ್ಸ್‌ಗೆ ಅರ್ಜಿ ಆಹ್ವಾನ

Last Updated 13 ಮೇ 2019, 12:15 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ವು ಈ ಭಾಗದ ಯುವಕರಿಗೆ ಉನ್ನತ ಕೌಶಲಾಧಾರಿತ ತಾಂತ್ರಿಕ ತರಬೇತಿಗಳನ್ನು ನಡೆಸುತ್ತಿದೆ. ಈ ಸಂಸ್ಥೆಯ ಪ್ರಸಕ್ತ ಸಾಲಿನ ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ (ಡಿಟಿಡಿಎಂ) ಕೋರ್ಸಿಗೆ ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಲಾಗಿದೆ.

ಈ ಕೋರ್ಸಿಗೆ ಸರ್ಕಾರ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾನ್ಯತೆಯಿರುತ್ತದೆ. ಈ ಕೋರ್ಸ್ ನಾಲ್ಕು ವರ್ಷ ಅವಧಿಯದ್ದಾಗಿದ್ದು, ಮೊದಲ ಮೂರು ವರ್ಷ ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು. ಆನಂತರ ನಾಲ್ಕನೇ ವರ್ಷ, ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಕಡ್ಡಾಯ ಕೈಗಾರಿಕಾ ತರಬೇತಿಗಾಗಿ ಕಳುಹಿಸಲಾಗುವುದು. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಆಕರ್ಷಕ ಸ್ಟೈಫಂಡ್ ಮತ್ತು ಇನ್ನಿತರ ಸೌಲಭ್ಯಗಳನ್ನು ಕೂಡ ದೊರೆಯುತ್ತದೆ.

ಅರ್ಜಿಯು ಉಪಕೇಂದ್ರದಲ್ಲಿ ದೊರೆಯುತ್ತಿದ್ದು, ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಮೇ 28ರ ಸಂಜೆ 5 ಗಂಟೆಯೊಳಗಾಗಿ ಉಪಕೇಂದ್ರದಲ್ಲಿ ಸಲ್ಲಿಸಬೇಕು.

ಈ ಕೋರ್ಸ್‌ನಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ 371 (ಜೆ) ಮೀಸಲಾತಿ ಇರುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ಕರ್ನಾಟಕ ಮೆರಿಟ್-ಕಮ್-ರೋಸ್ಟರ್ ಪದ್ದತಿಯಂತೆ ನಡೆಸಲಾಗುವುದು. ಈ ತರಬೇತಿಯು ಇನ್ನಿತರ ಡಿಪ್ಲೋಮಾ ಕೋರ್ಸ್‌ಗಳಿಗಿಂತ ವಿಭಿನ್ನವಾಗಿದ್ದು, ಹಲವಾರು ವಿಶೇಷತೆಗಳನ್ನು ಹೊಂದಿರುತ್ತದೆ. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಶೇ 100 ರಷ್ಟು ಉದ್ಯೋಗ ದೊರಕಿಸಿಕೊಟ್ಟ ದಾಖಲೆ ಸಂಸ್ಥೆಗಿದೆ. ಸಂಸ್ಥೆಯಿಂದ ತರಬೇತಿಯನ್ನು ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಎಸ್ಸೆಸ್ಸೆಲ್ಸಿ ಪಾಸಾದ ಕ್ರಿಯಾಶೀಲ, ಸೃಜನಶೀಲ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ (ಡಿಟಿಡಿಎಂ) ತರಬೇತಿಯು ಸುವರ್ಣಾವಕಾಶವಾಗಿದ್ದು, ಅತ್ಯಂತ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಶಿಕ್ಷಣ ನೀಡಿ, ಉದ್ಯೋಗ ದೊರಕಿಸಿಕೊಡುವ ವಿಶಿಷ್ಟ ತರಬೇತಿಯಾಗಿದೆ. ಈ ತರಬೇತಿಗೆ ಸೇರುವ ಅರ್ಹ ಅಭ್ಯರ್ಥಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶಿಕ್ಷಣ ಸಾಲದ ಸಹಾಯ ಕೂಡ ದೊರೆಯುತ್ತದೆ.

ತರಬೇತಿಯು ನಂತರ ಉನ್ನತ ವಿದ್ಯಾಭ್ಯಾಸವಾದ ಬಿಇ ಮಾಡಲು ಅವಕಾಶವೂ ಇದೆ. ಆಸಕ್ತ ವಿದ್ಯಾರ್ಥಿ, ಪಾಲಕರು ಅರ್ಜಿಗಳನ್ನು ಜಿಟಿಟಿಸಿ-ಲಿಂಗಸುಗೂರು ಉಪಕೇಂದ್ರದಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 9916231899, 8762564872 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT