ಮಾನ್ವಿ: ತಾಲ್ಲೂಕಿನ ಅಂಗವಿಕಲರ ಕುಂದುಕೊರತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ಪಿಡಿ ಟಾಸ್ಕ್ ಫೋರ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಉಪತಹಶೀಲ್ದಾರ್ ವಿನಾಯಕರಾವ ಅವರಿಗೆ ಮನವಿ ಸಲ್ಲಿಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಜಾಫರ್ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಅಂಗವಿಕಲರು ಹಾಗೂ ಅವರ ಪೋಷಕರ ಸಮಸ್ಯೆಗಳು, ಶೈಕ್ಷಣಿಕ ಸ್ಥಿತಿಗತಿ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳು ಇವೆ. ಈ ಸಮಸ್ಯೆಗಳ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಅಂಗವಿಕಲರು ಪಡೆಯಲು ಸಾಧ್ಯವಾಗದ ಕುರಿತು ಚರ್ಚಿಸಲು ಶೀಘ್ರದಲ್ಲಿ ತಾಲೂಕ ಮಟ್ಟದ ಅಂಗವಿಕಲರ ಕುಂದುಕೊರತೆ ಸಭೆ ಹಮ್ಮಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ತಾಲ್ಲೂಕು ಅಧ್ಯಕ್ಷ ಹನುಮೇಶ ಕಾತರಕಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ, ಸದಸ್ಯರಾದ ಸತ್ತಪ್ಪಯ್ಯ, ದೊಡ್ಡ ನರಸಪ್ಪ, ನರಸಪ್ಪ ಕಾತರಕಿ, ವೀರೇಶ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.