ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ ಅಗತ್ಯ’

ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
Last Updated 21 ಅಕ್ಟೋಬರ್ 2022, 6:35 IST
ಅಕ್ಷರ ಗಾತ್ರ

ಮಾನ್ವಿ: ‘ವಿದ್ಯಾರ್ಥಿಗಳು ಅಧ್ಯಯನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಕ್ರಿಯಾಶೀಲತೆ ರೂಢಿಸಿಕೊಂಡರೆ ಉತ್ತಮ ಸಾಧನೆ ಸಾಧ್ಯ’ ಎಂದು ಪ್ರಾರ್ಥನಾ ದತ್ತಿ ಸಂಸ್ಥೆಯ ಅಧ್ಯಕ್ಷ ಡಾ.ಯಂಕನಗೌಡ ಬೊಮ್ಮನಹಾಳ ಹೇಳಿದರು.

ಗುರುವಾರ ಪೋತ್ನಾಳ ಸಮೀಪದ ಮರಕಂದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಗು ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವ್ಯಕ್ತಿತ್ವ ವಿಕಸನ ಕುರಿತು ಉಪನ್ಯಾಸ ಹಾಗೂ ಬಹುಮಾನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗು ಟ್ರಸ್ಟ್‌ನ ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಅವರು ₹ 5ಸಾವಿರ ದೇಣಿಗೆ ನೀಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೇಶ್ ಮಾತನಾಡಿ, ‘ ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇತರ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಬೆಳಗು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಾಮಾನ್ಯಜ್ಞಾನ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಬೆಳಗು ಟ್ರಸ್ಟ್ ಅಧ್ಯಕ್ಷ ಶರಣು ಕುಮಾರ ಮುದ್ದನಗುಡ್ಡಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಆರ್.ಸತ್ಯನಾರಾಯಣ ಮುಷ್ಟೂರು ವಕೀಲ, ಹನುಮೇಶ ಕವಿತಾಳ ವಕೀಲ, ಕಮಲಾಕ್ಷಿ, ಅಮರೇಶ, ಗೂಳಪ್ಪ, ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT