ಗುರುವಾರ , ಮಾರ್ಚ್ 30, 2023
32 °C
ಗ್ರಾಮ ಪಂಚಾಯಿತಿ ಆರೋಗ್ಯ ಅಮೂರ್ತ ಅಭಿಯಾನಕ್ಕೆ ಚಾಲನೆ, ಆರೋಗ್ಯ ಕಿಟ್‌ಗಳ ವಿತರಣೆ

ಸರ್ಕಾರದ ಸೌಲಭ್ಯಗಳ ಸದ್ಬಳಕೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಮಾನ್ವಿ:  ‘ವಿವಿಧ ಇಲಾಖೆಗಳ ಸಿಬ್ಬಂದಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜನರ ಸೇವೆ ಮಾಡಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಶನಿವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್( ಕೆ.ಎಚ್.ಸಿ.ಟಿ.) ವತಿಯಿಂದ ಗ್ರಾಮ ಪಂಚಾಯಿತಿ ಆರೋಗ್ಯ ಅಮೂರ್ತ ಅಭಿಯಾನ ಹಾಗೂ ಆರೋಗ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ, ಆಶಾ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ವೈದ್ಯಾಧಿಕಾರಿ ಡಾ.ಅಂಬಿಕಾ ಮಧುಸೂದನ, ಡಾ.ಶರಣಬಸವ ಪಾಟೀಲ್ ಮುಷ್ಟೂರು, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನ ವ್ಯವಸ್ಥಾಪಕ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.