ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ದರ ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿ: ಬಿಎಸ್‌ಪಿ ಆಗ್ರಹ

Last Updated 10 ಜೂನ್ 2021, 17:31 IST
ಅಕ್ಷರ ಗಾತ್ರ

ರಾಯಚೂರು: ಪೆಟ್ರೋಲ್, ಡಿಸೆಲ್ ದರ ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿ ಬಹುಜನ‌ ಸಮಾಜ ಪಕ್ಷ (ಬಿಎಸ್‌ಪಿ) ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಬುಧವಾರ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಮಾಡುತ್ತಿವೆ. ಇವರೆಡರ ಮೇಲೆ ಶೇ 300 ರಷ್ಟು ತೆರಿಗೆ ವಿಧಿಸುತ್ತಿದ್ದು ಈಗ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಯಾಗಿ‌ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ದೂರಿದರು.

ಹೆಚ್ಚಿನ ತೆರಿಗೆ ವಿಧಿಸಿ ಶೋಷಣೆ ಮಾಡಲಾಗುತ್ತಿದೆ. ಕೋವಿಡ್ ನಿರ್ಮೂಲನೆಯಲ್ಲಿ ಸರ್ಕಾರ ವಿಫಲವಾಗಿದೆ. ಆಕ್ಸಿಜನ್, ವೆಂಟಿಲೆಟರ್, ಔಷಧಿಗಳನ್ನು‌ ಸರಿಯಾದ ಸಮಯಕ್ಕೆ ನೀಡದ ಪರಿಣಾಮ‌ ಅನೇಕ ಜನರ ಸಾವಿಗೆ ಕಾರಣವಾಗಿದೆ. ಸರ್ಕಾರದ ಲಾಕ್ ಡೌನ್ ನಿಂದ ಅನೇಕರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅಡುಗೆ ಅನಿಲ ದರ, ವಿದ್ಯುತ್ ದರ, ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಯಾಗಿ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ರಾಷ್ಟ್ರಪತಿ ಅವರು ಮಧ್ಯಪ್ರವೇಶಿಸಿ ಅವೈಜ್ಞಾನಿಕ ತೆರಿಗೆ ಏರಿಕೆಯನ್ನು ಕೈಬಿಡುವಂತೆ ಸೂಚನೆ ನೀಡಬೇಕು. ಪೆಟ್ರೋಲ್ ಮತ್ತು ಡೀಸೆಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಬಸವರಾಜ ಭಂಡಾರಿ, ರಾಜ್ಯ ಕಾರ್ಯದರ್ಶಿ ವೈ. ನರಸಪ್ಪ, ಜಿಲ್ಲಾ ಪದಾಧಿಕಾರಿ ಎಂ.ಆರ್. ಭೇರಿ, ವೀರೇಶ ಮಡಿವಾಳ, ಶ್ರೀನಿವಾಸ ಕೊಪ್ಪರ, ಮಲ್ಲೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT