ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್‌: ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯ 16 ಜನರಲ್ಲಿ ಕೋವಿಡ್ ಸೋಂಕು ಪತ್ತೆ
Published 6 ಜನವರಿ 2024, 15:29 IST
Last Updated 6 ಜನವರಿ 2024, 15:29 IST
ಅಕ್ಷರ ಗಾತ್ರ

ರಾಯಚೂರು: ‘ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. 15 ದಿನಗಳ ಅವಧಿಯಲ್ಲಿ 1,042 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿ ಒಟ್ಟು 16 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಲ್‌. ಚಂದ್ರಶೇಖರ ನಾಯಕ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್ ಮುಂಜಾಗೃತಾ ಸಭೆ ನಡೆಸಿ ಅವರು ಮಾತನಾಡಿದರು.

‘14 ಜನರು ಹೋಂ ಕ್ವಾರೆಂಟೆನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಉಳಿದ ಇಬ್ಬರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ರಿಮ್ಸ್ ಆಸ್ಪತ್ರೆ ಮತ್ತು ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ ಮಾಡಿಕೊಳ್ಳಬೇಕು. ಕೋವಿಡ್ ಸೋಂಕಿತರ ಆಸ್ಪತ್ರೆಯಲ್ಲಿ ದಾಖಲಾದಾಗ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘60 ಮೇಲ್ಪಟ್ವವರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ನೆಗಡಿ ಕೆಮ್ಮಿನಂತ ಲಕ್ಷಣಗಳು ಕಂಡುಬಂದಲ್ಲಿಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರಿಕ್ಷೆ ಮಾಡಿಸಿಕೊಳ್ಳಬೇಕು. ಧೀರ್ಘ ಕಾಲದಿಂದ ಚಿಕಿತ್ಸೆ ಪಡೆಯುವವರು ಹೊರಗಡೆ ಹೋಗುವಾಗ ಮಾಸ್ಕ ಧರಿಸಬೇಕು’ ಎಂದು ಹೇಳಿದರು.

‘ಸಭೆ, ಸಮಾರಂಭಗಳಲ್ಲಿ ಮಾಸ್ಕ ಧರಿಸಬೇಕು. ನಮ್ಮ ಆರೋಗ್ಯ ಕಾಳಜಿ ನಾವೇ ವಹಿಸಬೇಕು. ಇತರರಿಗೂ ತೊಂದರೆಯಾಗದಂತೆ ಎಚ್ಚರವಹಿಸಬೇಕು’ ಎಂದು ತಿಳಿಸಿರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ಭೋಧಕ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ, ರಿಮ್ಸ್ ಬೋಧಕ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾಖೀರ್ ಮೊಯಿನುದ್ದೀನ್, ನವೋದಯ ವೈದ್ಯಕೀಯ ಸಂಸ್ಥೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT