ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಸಚಿವ ಶಂಕರ ಪಾಟೀಲ

Last Updated 10 ಮೇ 2022, 14:05 IST
ಅಕ್ಷರ ಗಾತ್ರ

ರಾಯಚೂರು: ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬರಗಾಲ ಪೀಡಿತ ಪ್ರದೇಶ ಜಿಲ್ಲೆಯಾದ ರಾಯಚೂರಿನಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ 2022ನೇ ಸಾಲಿನ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದುಳಿದ ಜಿಲ್ಲೆಯಾದ ರಾಯಚೂರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಇದ್ದು, ಯಾವುದೇ ರೀತಿಯ ಸಮಸ್ಯೆ ಯಾಗದಂತೆ ಕ್ರಮವಹಿಸಬೇಕು. ಜೆಜೆಎಂ ಯೋಜನೆಯ ಮೂಲಕ ಹಳ್ಳಿಯ ಪ್ರತಿಯೊಂದು ಮನೆಗಳಲ್ಲೂ ಕುಡಿಯುವ ನೀರಿನ ತೊಂದರೆಯಾಗದ ಹಾಗೆ ನೀರು ಒದಗಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡಲೇ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀರಿನ ಅಭಾವ ಇದ್ದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಬೇಕು ಎಂದು ಹೇಳಿದರು.

ಯಾವುದೇ ನೀರಿನ ಪೈಪ್ ಲೈನ್, ಹಳೆಯದಾದರೆ, ಒಡೆದುಹೊಗಿದ್ದರೆ ಅಂತಹ ಪೈಪ್ ಲೈನ್‌ಗಳನ್ನು ಕೂಡಲೇ ದುರಸ್ತಿ ಮಾಡಿ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಸಾಧ್ಯವಾದರೆ ಕೊಳವೆಬಾವಿ ಕೊರೆದು ಅದರ ಮುಖಾಂತರ ಜನರಿಗೆ ಕುಡಿಯುವ ನೀರಿನ ಅಭಾವವಾಗದಂತೆ ಎಲ್ಲರೂ ಪಕ್ಷ ಬೇಧ ಮರೆತು ನೋಡಿಕೊಳ್ಳಲು ಮುಂದಾಗೋಣ ಎಂದು ಶಾಸಕರಿಗೆ ಮನವಿ ಮಾಡಿದರು.

ಗಣಿ ಮತ್ತು ಭೂವಿಜ್ಞಾನ ಸಚಿವ ಆಚಾರ ಹಾಲಪ್ಪ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ್ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾ ರಿಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT