ಕರ್ತವ್ಯ ನಿರ್ವಹಣೆಗೆ ಜನರಿಂದ ಸಹಕಾರ: ಡಾ.ಬಗಾದಿ ಗೌತಮ್

7

ಕರ್ತವ್ಯ ನಿರ್ವಹಣೆಗೆ ಜನರಿಂದ ಸಹಕಾರ: ಡಾ.ಬಗಾದಿ ಗೌತಮ್

Published:
Updated:
Deccan Herald

ರಾಯಚೂರು: ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಣೆಗೆ ಹಾಗೂ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯಗಳಿಗೆ ಜಿಲ್ಲೆಯ ಜನರು ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ದಾವಣಗೆರೆಗೆ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಶನಿವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಜಿಲ್ಲೆಯನ್ನು ಹಿಂದುಳಿದ ಪ್ರದೇಶವೆಂದು ಹೇಳಲಾಗುತ್ತಿದೆ. ಆದರೆ, ಹಲವು ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿದೆ. ಶೈಕ್ಷಣಿಕ, ಆರೋಗ್ಯ ಹಾಗೂ ಇತರೆ ಕ್ಷೇತ್ರಗಳಲ್ಲಿಯೂ ಮುಂದುವರೆಯಲು ಅಧಿಕಾರಿಗಳು ಶ್ರಮಪಡುವ ಅಗತ್ಯವಿದೆ ಎಂದರು.

ನೂತನ ಜಿಲ್ಲಾಧಿಕಾರಿ ಬಿ.ಶರತ್ ಅವರಿಗೂ ಸಹಕಾರ ನೀಡುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಉಪವಿಭಾಗಾಧಿಕಾರಿಗಳಾದ ಶಿಲ್ಪಾ ಶರ್ಮಾ, ಎಂ.ಪಿ.ಮಾರುತಿ ಅವರು ಜಿಲ್ಲಾಧಿಕಾರಿಯನ್ನು ಸನ್ಮಾನಿಸಿ ಬೀಳ್ಕೊಟ್ಟರು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಸನ್ಮಾನಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶರಣಬಸವ ಸ್ವಾಗತಿಸಿದರು, ದಂಡಪ್ಪ ಬಿರಾದಾರ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !