ಮಂಗಳವಾರ, ಡಿಸೆಂಬರ್ 1, 2020
23 °C
ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್‌ ಅಧ್ಯಕ್ಷತೆಯಲ್ಲಿ ಸಭೆ

‘ಜಿಲ್ಲೆಯಲ್ಲಿ ಪಟಾಕಿ ಮಾರಾಟ ನಿಷೇಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯಾದ್ಯಂತ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸರಳ ಆಚರಣೆ ಕುರಿತಂತೆ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೀಪಾವಳಿಯನ್ನು ಪ್ರತಿ ಬಾರಿ ವಿಜೃಂಭಣೆಯಿಂದ ಆಚರಿಸಲಾಗುತಿತ್ತು. ಆದರೆ ಈ ಬಾರಿ ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರ ನಿರ್ದೇಶನ
ದಂತೆ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ಸಂಪೂ
ರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ. ಹಬ್ಬ ಆಚರಿಸಲು ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಿಎಸ್‍ಐಆರ್, ಎನ್‍ಇಇಆರ್ ಚಿನ್ಹೆ
ಯುಳ್ಳ ಹಸಿರು ಪಟಾಕಿಗಳನ್ನು ಬಳಸ
ಬೇಕು. ಅದನ್ನು ಹೊರತು ಪಡಿಸಿ ಬೇರೆ ಪಟಾಕಿಗಳನ್ನು ಉಪಯೋಗಿಸಬಾರದು. ಈ ದಿಸೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು.

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ
ಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತ
ದೃಷ್ಟಿಯಿಂದ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ವಚ್ಛತೆ ಕಾಪಾ
ಡುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಜರ್ ಬಳಸಬೇಕು. ಮಾಸ್ಕ್ ಧರಿಸದವರ ವಿರುದ್ದ ಸರ್ಕಾರದ ನಿರ್ದೇಶನದಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಜನರು ಮನೆ ಮಠ ಕಳೆದುಕೊಂಡು ಅಪಾರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಬೇಕಾಗಿದೆ. ಪಟಾಕಿ ಸಿಡಿಸು
ವುದರಿಂದ ವಾಯು ಮಾಲಿನ್ಯ ಉಂಟಾಗಿ ಉಸಿರಾಟದ ತೊಂದರೆ ಎದುರಿ
ಸಬೇಕಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ತರಹದ ಪಟಾಕಿ ಮಾರಾಟ ಹಾಗೂ ಸಿಡಿಸು
ವುದನ್ನು ಸಂಪೂರ್ಣವಾಗಿ ನಿಷೇಧಿಸ
ಲಾಗಿದೆ. ನವೆಂಬರ್‌ 14 ರಿಂದ 16ರ ವರೆಗೆ ಮೂರು ದಿನಗಳ ಕಾಲ ತಹಶೀಲ್ದಾರರು, ಡಿವೈಎಸ್‍ಪಿ, ಮುಖ್ಯಾ
ಧಿಕಾರಿಗಳ ನೇತೃತ್ವದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಮೂರು ದಿನಗಳ ಕಾಲ ಪಟಾಕಿ ಮಾರಾಟ ಹಾಗೂ ಸಿಡಿಸುವವರ ಮೇಲೆ ಹೆಚ್ಚಿನ ಗಮನ ಹರಿಸಬೇಕು ಹಾಗೂ ಸಿಡಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಮಹೇಂದ್ರಕುಮಾರ್, ನಗರ
ಸಭೆ ಪೌರಾಯುಕ್ತ ದೇವಾನಂದ ದೊಡ್ಡ
ಮನಿ, ತಹಶೀಲ್ದಾರ ಡಾ.ಹಂಪಣ್ಣ, ಅಗ್ನಿ ಶಾಮಕದಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.