ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಿಪಾಳ್ಯ ನರಸಿಂಹಮೂರ್ತಿ ಖುಲಾಸೆ

Last Updated 3 ಅಕ್ಟೋಬರ್ 2020, 3:04 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ 25 ವರ್ಷಗಳ ಹಿಂದೆ ನಡೆದ ನಕ್ಸಲ್‌ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಯರಗೇರಾ ಮತ್ತು ಯಾಪಲದಿನ್ನಿ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳಿಂದ ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಮುಸ್ತಫ್‌ ಹುಸೇನ್ ಅವರು ಈ ತೀರ್ಪು ನೀಡಿದ್ದಾರೆ. ಆರೋಪಿ ಪರವಾಗಿ ವಕೀಲರಾದ ಪದ್ಮವರ್ಧನ್‌ ಹಾಗೂ ಮಾರುತಿ ಅವರು ವಾದ ಮಂಡಿಸಿದ್ದರು.

ಸ್ವರಾಜ್‌ ಇಂಡಿಯಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು 2019ರ ಅ. 24ರಂದು ರಾಯಚೂರಿಗೆ ಬಂದಿದ್ದ ವೇಳೆ ಪೊಲೀಸರು ಬಂಧಿಸಿದ್ದರು. 2020ರ ಜ. 8 ರಂದು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT