ಹಟ್ಟಿಚಿನ್ನದಗಣಿ: ಪಟ್ಟಣದಲ್ಲಿ 15 ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಗಾಯಾಳುಗಳು ಹಟ್ಟಿ ಚಿನ್ನದ ಗಣಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇದಿನಾಪುರ ಗ್ರಾಮಕ್ಕೆ ತೆರಳುತ್ತಿದ್ದ ಜನರಿಗೂ ಹುಚ್ಚು ನಾಯಿ ಕಚ್ಚಿದೆ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ತಿರುಗಾಡದಂತೆ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.