ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ದುಡಿಮೆಗೆ ಕಳುಹಿಸಬೇಡಿ: ಬೈಲೂರು ಶಂಕರರಾಮ

Last Updated 12 ಜೂನ್ 2019, 13:29 IST
ಅಕ್ಷರ ಗಾತ್ರ

ರಾಯಚೂರು: ಮಕ್ಕಳು ದೇಶದ ಸಂಪತ್ತು. ಅವರನ್ನು ಬಾಲ್ಯದಲ್ಲಿ ದುಡಿಮೆಗೆ ಕಳುಹಿಸಿ ಅವರ ಬಾಲ್ಯವನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ಜಿಲ್ಲಾಧಿಕಾರಿ ಕಛೇರಿಯ ಆವರಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ಕಾರ್ಮಿಕರ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಕಾನೂನು ಅರಿವು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಬಡತನ ಮತ್ತು ಸಾಮಾಜಿಕ ತೊಂದರೆಯಿಂದ ಪಾಲಕರು ಮಕ್ಕಳನ್ನು ನಿರ್ಲಕ್ಷ್ಯಿಸುತ್ತಾರೆ. ಈ ಕಾರಣದಿಂದಾಗಿ ಅಂಗಡಿ, ಬೇರೆ ಬೇರೆ ಕೈಗಾರಿಕೆಗಳಲ್ಲಿ ಮಕ್ಕಳು ಕೆಲಸ ಮಾಡುವುದನ್ನು ಕಾಣುತ್ತೇವೆ. ಬಾಲ ಕಾರ್ಮಿಕರನ್ನು ದುಡಿಸುವುದು ಕಾನೂನಿನ ಅಪರಾಧ ಎಂದರು.

ಬಾಲ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಲವಾರು ಕೇಸುಗಳನ್ನು ಹಾಕಿದ್ದು, ಅವರನ್ನು ದಿನಾಲೂ ಕೋರ್ಟ್‌ನಲ್ಲಿ ನೋಡುವಂತಾಗಿದೆ. ಸಮಸ್ಯೆಗೆ ಇದು ಪರಿಹಾರವಲ್ಲ. ಅಂಗಡಿ ಹೋಟೆಲ್‌ಗಳಲ್ಲಿ 12 ವರ್ಷದ ಬಾಲಕರು ಕೆಲಸ ಮಾಡುವುದು ಕಂಡರೆ ಸಾರ್ವಜನಿಕರು ತಕ್ಷಣ ತಹಶೀಲ್ದಾರ್ ಅಥವಾ ಮಕ್ಕಳ ಕಲ್ಯಾಣ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಇದು ಮಕ್ಕಳ ರಕ್ಷೆಣೆ ಮಾತ್ರವಲ್ಲ, ದೇಶದ ಭದ್ರತೆಗೆ ಸಹಕಾರಿಯಾಗುತ್ತದೆ. ಮಕ್ಕಳನ್ನು ಬಾಲಾಪರಾಧಿಗಳಾಗದಂತೆ ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಬಾಲಕಾರ್ಮಿಕ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಬಾಲಕಾರ್ಮಿಕ ತರಬೇತಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಮಾಡಿಸ ಮಕ್ಕಳನ್ನು ಸನ್ಮಾನಿಸಲಾಯಿತು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ.ನಾಡಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT