ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡಾ.ಬಿ.ಆರ್‌.ಅಂಬೇಡ್ಕರ್‌ ಆದರ್ಶಗಳು ಮಾದರಿ’

Last Updated 2 ಜನವರಿ 2019, 16:29 IST
ಅಕ್ಷರ ಗಾತ್ರ

ರಾಯಚೂರು: ಡಾ. ಬಿ. ಆರ್. ಅಂಬೇಡ್ಕರ್‌ ಅವರ ಆದರ್ಶ ಗುಣಗಳನ್ನು ಮಾದರಿಯಾಗಿ ತೆಗೆದುಕೊಂಡು ಎಲ್ಲರೂ ಜಾತಿ ಭೇದ-ಭಾವಗಳನ್ನು ಬಿಟ್ಟು ಬಾಳಬೇಕು ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಲಯದ ಕುಲಪತಿ ಡಾ.ಕೆ.ಎನ್‌. ಕಟ್ಟಿಮನಿ ಹೇಳಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ಪ್ರೇಕ್ಷಾಗೃಹದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ’ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌ ಅವರ 2019 ರ ದಿನಸೂಚಿ ಬಿಡುಗಡೆ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವ್ಯವಸ್ಥಾಪನಾ ಮಂಡಳಿಯ ಸದಸ್ಯ ಅಮೇಶ ಬಲ್ಲಿದವ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಇಂತಹ ಕಾರ್ಯಕ್ರಮಗಳು ಸಂಬಂಧಿಸಿದವರ ನೈತಿಕತೆಯನ್ನು ಹೆಚ್ಚಿಸಿ ಉತ್ತಮ ಕಾರ್ಯಪ್ರವೃತ್ತರಾಗಲು ಸಹಕರಿಸಬೇಕು ಎಂದು ತಿಳಿಸಿದರು.

ಕೃಷಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಜಾಗೃತಿ ದೇಶಮಾನ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ. ಬಿ. ಅರ್. ಅಂಬೇಡ್ಕರ್‌ ಅವರ ಜೀವನ ಚರಿತ್ರೆ, ಸಂವಿಧಾನದ ಮಹತ್ವ ಮತ್ತು ಭೀಮಾ ಕೋರೆಗಾಂವದ ಬಗ್ಗೆ ತಿಳಿಸಿದರು.

ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಸಿದ್ದಪ್ಪ ಭಂಡಾರಿ, ಅಧಿಕಾರಿಗಳಾದ ಡಾ. ಎಸ್. ಕೆ ಮೇಟಿ, ಡಾ. ಬಿ. ಕೆ. ದೇಸಾಯಿ, ಡಾ. ಬಿ.ಎಂ. ಚಿತ್ತಾಪೂರ, ಡಾ. ಎಂ.ಜಿ. ಪಾಟೀಲ, ಡಾ. ಡಿ. ಎಂ. ಚಂದರಗಿ, ಡಾ. ವೀರನಗೌಡ, ಡಾ. ಭೀಮಣ್ಣ, ಮಲ್ಲಿಕಾರ್ಜುನ ಬಿರಾದಾರ ಇದ್ದರು. ವಿರುಪಣ್ಣ ನಿರೂಪಿಸಿದರು. ಡಾ. ಮಹಾದೇವ ಸ್ವಾಮಿ ಸ್ವಾಗತಿಸಿದರು. ವಸಂತ್‌ಕುಮಾರ್‌ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT