ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪುಷ್ಪನಮನ

ರಾಯಚೂರು: ಜಿಲ್ಲೆಯ ವಿವಿಧೆಡೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾನಿರ್ವಾಣ ದಿನ ಆಚರಿಸಲಾಯಿತು.
ಮಹಾಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆಯ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಅಂಬೇಡ್ಕರ್ ಅವರ ವಿಚಾರಧಾರೆಗಳು, ಚಿಂತನೆಗಳು ಹಾಗೂ ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ಹಾಗೂ ಅವರ ಸಾಧನೆ ಮತ್ತು ಹೋರಾಟಗಳನ್ನು ಸ್ಮರಿಸಲಾಯಿತು.
ನಗರಸಬೆ ಅಧ್ಯಕ್ಷೆ ಲಲಿತಾ ಕಡಗೋಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಭಂತೇಜಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪನಮನ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.