ಸೋಮವಾರ, ಸೆಪ್ಟೆಂಬರ್ 27, 2021
21 °C

ರಾಯಚೂರು ನೂತನ ಜಿಲ್ಲಾಧಿಕಾರಿ ಡಾ.ಸತೀಶ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ ಬಿ.ಸಿ. ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಆನಂತರ ಮಾತನಾಡಿದ ‌ಅವರು, ‘ಜಿಲ್ಲಾಧಿಕಾರಿಯಾಗಿ ಮೊದಲ ಸಲ ನಿಯೋಜನೆ ಆಗಿರುವುದರಿಂದ ಈಗಲೇ ಏನೇನು ಕೆಲಸ ಮಾಡುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಸರ್ಕಾರದ ನಿಯಮಾನುಸಾರ ವಹಿಸಿದ ಕೆಲಸವನ್ನು ಶ್ರದ್ಧೆ, ನಿಷ್ಠೆಯಿಂದ ಮಾಡುತ್ತೇನೆ’ ಎಂದರು.

2012 ರ ಬ್ಯಾಚ್ ಕೆಎಎಸ್ ಅಧಿಕಾರಿಯಾಗಿದ್ದು, 2017 ರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದರು.‌ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಯುಕ್ತರಾಗಿದ್ದ ಅವರನ್ನು ಮೊದಲಬಾರಿ ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಆರ್. ವೆಂಕಟೇಶ ಕುಮಾರ್ ಅವರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು