ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುದಗಲ್: ರಸ್ತೆ ಮೇಲೆಯೇ ಚರಂಡಿ ನೀರು ಸಂಗ್ರಹ

Published 15 ಜೂನ್ 2024, 15:33 IST
Last Updated 15 ಜೂನ್ 2024, 15:33 IST
ಅಕ್ಷರ ಗಾತ್ರ

ಮುದಗಲ್: ಸಮೀಪದ ಉಪ್ಪಾರ ನಂದಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ನಿಲ್ಲುತ್ತಿದೆ.

ಗ್ರಾಮದಲ್ಲಿ ಚರಂಡಿ ನೀರು ಮುಂದೆ ಹರಿಯಲು ದಾರಿ ಇಲ್ಲದೆ ನೀರು ನಿಂತಲ್ಲೇ ನಿಂತು ಸೊಳ್ಳೆಗಳು ಹುಟ್ಟುತ್ತಿವೆ. ಇದರಿಂದ ರೋಗಗಳ ಭೀತಿ ಹೆಚ್ಚಾಗಿದೆ. 

‘ಈ ಬಗ್ಗೆ ಉಪ್ಪಾರ ನಂದಿಹಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅನೇಕ ಬಾರಿ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸಮಸ್ಯೆ ಪರಿಹರಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT