ಕೊತ್ತದೊಡ್ಡಿ ಗ್ರಾಮದ ಹೊರವಲಯದಲ್ಲಿ ಜಲ ನಿರ್ಮಲ ಯೋಜನೆಯಡಿ ನಿರ್ಮಾಣ ಮಾಡಲಾದ ನೀರು ಶುದ್ಧಿಕರಣ ಘಟಕ ಪಾಳು ಬಿದ್ದಿರುವುದು
ಕೊತ್ತದೊಡ್ಡಿ ಗ್ರಾಮದ ಜನರು ನೀರು ಹಿಡಿದುಕೊಳ್ಳಲು ಪರದಾಡುತ್ತಿರುವುದು
ಕೊತ್ತದೊಡ್ಡಿ ಗ್ರಾಮದ ಹೊರವಲಯದಲ್ಲಿ ಜಲ ನಿರ್ಮಲ ಯೋಜನೆಯಡಿ ನಿರ್ಮಿಸಲಾದ ಕುಡಿಯುವ ನೀರಿನ ಕೆರೆ

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳ ಸಭೆ ನಡೆಸಿ ನಿರ್ವಹಣೆ ಮತ್ತು ದುರಸ್ತಿಗೆ ಸೂಚಿಸುವೆ
ಕರೆಮ್ಮ ಜಿ.ನಾಯಕ ಶಾಸಕಿ 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾಮಗಾರಿ ಪೂರ್ಣಗೊಳಿಸಿ ಬಳಕೆಯ ಸ್ಥಿತಿಯಲ್ಲಿ ಪಂಚಾಯಿತಿಗೆ ಹಸ್ತಾಂತರಿಸಿದರೆ ನಿರ್ವಹಣೆ ಮಾಡಲು ಪಂಚಾಯಿತಿಗೆ ಸೂಚಿಸುವೆ ಬಸವರಾಜ ಹಟ್ಟಿ ಇಒ

ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಘಟಕಗಳು ನಿರ್ವಹಣೆ ಅನುದಾನ ಕೊರತೆಯಿಂದ ಸ್ಥಗಿತವಾಗಿವೆ. ದುರಸ್ತಿ ಮತ್ತು ನಿರ್ವಹಣೆ ಬಗ್ಗೆ ಇಇ ಅವರ ಗಮನಕ್ಕೆ ತರುವೆ
ಹೀರಾಲಾಲ ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನಿರ್ಮಾಣ ಹಂತದಲ್ಲಿ ಸ್ಥಗಿತವಾಗಿದೆ. ಕಾಮಗಾರಿ ಪೂರ್ಣಗೊಳಿಸಿ ಪಂಚಾಯಿತಿಗೆ ವಹಿಸಿದ್ದಲ್ಲಿ ಪಂಚಾಯಿತಿ ವತಿಯಿಂದ ನಿರ್ವಹಣೆಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು
ಮೋನಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ