
ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂಥ ಸ್ಥಿತಿ ನಿರ್ಮಾಣವಾಗಿಲ್ಲ. ಕೆಲ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಕೊಡಲಾಗುತ್ತಿದೆ.
-ರಾಹುಲ್ ಪಾಂಡ್ವೆ, ಜಿಲ್ಲಾ ಪಂಚಾಯಿತಿ ಸಿಇಒ
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಕ್ಷೇತ್ರಗಳ ಶಾಸಕರು ಗ್ರಾಮಗಳಿಗೆ ಭೇಟಿಕೊಟ್ಟರೆ ಜನರ ಎದುರಿಸುತ್ತಿರುವ ಕುಡಿಯುವ ನೀರಿನ ಗಂಭೀರ ಸಮಸ್ಯೆಯ ಅರಿವಾಗಲಿದೆ.
-ರಂಗನಾಥ ಪೊಲೀಸ್‌ಪಾಟೀಲ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ 
ರಾಯಚೂರು ಜಿಲ್ಲೆಯಲ್ಲಿ 63 ಖಾಸಗಿ ಕೊಳವೆಬಾವಿಗಳ ನೀರನ್ನು ಬಾಡಿಗೆ ಪಡೆಯಲಾಗಿದೆ. 30 ಹಳ್ಳಿಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ
-ಶಿವಾನಂದ ಭಜಂತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿರಾಯಚೂರು ತಾಲ್ಲೂಕಿನ ಕಲ್ಮಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಳವಾಯಿ ಕ್ಯಾಂಪ್‌ನಲ್ಲಿ ಮಧ್ಯಾಹ್ನ ನೆತ್ತಿ ಸುಡುವ ಬಿಸಿಲಲ್ಲಿ ನೀರು ಒಯ್ಯುತ್ತಿರುವ ಮಹಿಳೆಯರು
ರಾಯಚೂರು ತಾಲ್ಲೂಕಿನ ಆತನೂರು ಬಳಿ ಕೃಷ್ಣಾ ನದಿ ಸಂಪೂರ್ಣ ಬತ್ತಿದೆ
ಮಾನ್ವಿ ತಾಲ್ಲೂಕಿನ ರಾಜಲಬಂಡಾ ಜಲಾಶಯದಲ್ಲೂ ನೀರಿನ ಪ್ರಮಾಣ ಕಡಿಮೆಯಾಗಿದೆ