ಗೌಡನಭಾವಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮಸ್ಕಿ: ಶಾಸಕರ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿ ಕೈಗೊಂಡ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಆರ್. ಬಸನಗೌಡ ಭಾನುವಾರ ಚಾಲನೆ ನೀಡಿದರು.
ತಾಲ್ಲೂಕಿನ ಸುಂಕನೂರು, ಚಿಕ್ಕ ಕಡಬೂರು, ಗೌಡನಭಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ಯೋಜನೆ ಚಾಲನೆ ನೀಡಿ ಮಾತನಾಡಿದ ಶಾಸಕ ಆರ್. ಬಸನಗೌಡ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಮಾದರಿ ತಾಲ್ಲೂಕು ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ ಎಂದರು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.