ದೇವಸೂಗೂರು (ಶಕ್ತಿನಗರ): ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದ ರಾಜಾ ಅಮರೇಶ ನಾಯಕ ಹೇಳಿದರು.

ಕರ್ನಾಟಕ ವಿದ್ಯುತ್ ನಿಗಮದ ಸಿಎಸ್‌ಆರ್ ಯೋಜನೆ ಅಡಿಯಲ್ಲಿ ದೇವಸೂಗೂರು ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಿದ್ಯುತ್ ಘಟಕಗಳ ನಿರ್ಮಾಣಕ್ಕಾಗಿ ಭೂಮಿ ಮತ್ತು ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ಥರ ಗ್ರಾಮಗಳನ್ನು ಅಭಿವೃದ್ಧಿ ಮಾಡುವ ಮೂಲಕ ಮಾದರಿ ಗ್ರಾಮಗಳನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ದೇವಸೂಗೂರು ಗ್ರಾಮದ ಸೂಗೂರೇಶ್ವರ ಸ್ವಾಮಿಯ ದೇವಸ್ಥಾನದ ಪ್ರಧಾನ ಅರ್ಚಕ ಶಾಂತವೀರೇಶ ನಂದಿಕೋಲ ಸ್ವಾಮಿ ಅವರು ಪೂಜೆ ಸಲ್ಲಿಸಿದರು.

ಆರ್‌ಟಿಪಿಎಸ್ ಸಿವಿಲ್ ವಿಭಾಗದ ಮುಖ್ಯ ಎಂಜಿನಿಯರ್ ಪ್ರಭುಸ್ವಾಮಿ, ದೇವಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂಗೂರೇಶ ದೊಡ್ಡಿ , ಉಪಾಧ್ಯಕ್ಷೆ ಮಹಾದೇವಿ ದೇಸಾಯಿ, ಪಿಡಿಒ ರವಿಕುಮಾರ, ಮುಖಂಡ ಸತೀಶಕುಮಾರ, ಆರ್‌ಟಿಪಿಎಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.