ಮಸ್ಕಿ : ತಾಲ್ಲೂಕಿನಾದ್ಯಂತ ಮಳೆಯಾಗದ ಕಾರಣ ಬೀಕರ ಬರಗಾಲ ಪರಿಸ್ಥಿತಿ ಉಂಟಾಗಿದೆ. ಆದರೆ, ಸರಕಾರವು ಬಿಡುಗಡೆ ಮಾಡಿದ ಬರಗಾಲ ಘೋಷಿತ ತಾಲ್ಲೂಕು ಪಟ್ಟಿಯಲ್ಲಿ ಮಸ್ಕಿ ತಾಲ್ಲೂಕನ್ನ ಕೈ ಬಿಟ್ಟಿರುವುದು ಖಂಡನೀಯ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದ್ದಾರೆ.
ಗುರುವಾರ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಶೇಕಡಾ 70 ರಷ್ಟು ಬರಗಾಲ ತಾಲ್ಲೂನಲ್ಲಿ ಇದ್ದರೂ ಸಹ ಸ್ಥಳೀಯ ಶಾಸಕರು ಹಾಗೂ ತಾಲೂಕ ಆಡಳಿತ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸುವಲ್ಲಿ ವಿಫಲರಾಗಿದ್ದಾರೆ.
ಇದರಿಂದ ತಾಲ್ಲೂಕಿನ ಜನ ಗುಳೆ ಹೊಗುವ ಪರಿಸ್ಥಿತಿ ಬಂದಿದೆ. ಕೂಡಲೇ ಸರಕಾರವು ಮಸ್ಕಿ ತಾಲ್ಲೂಕನ್ನ ತೀವ್ರ ಬರಗಾಲ ಪೀಡಿತ ತಾಲೂಕ ಎಂದು ಘೋಷಣೆ ಮಾಡಬೇಕು. ಒಂದು ವೇಳೆ ಸರಕಾರವು ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ನೇತೃತ್ಬದಲ್ಲಿ ಬೀದಿ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.