ಸೋಮವಾರ, ಆಗಸ್ಟ್ 2, 2021
28 °C

ಕಳಪೆ ಹತ್ತಿಬೀಜ ಮಾರಾಟ: ಮೂವರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಕಳಪೆ ಹತ್ತಿಬೀಜ ಮಾರಾಟ ಮಾಡುತ್ತಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಮರಾವ್‌ ಆಂಜಿನೇಯ್ಯ, ರಾಮಾಂಜಿನೇಯ ರೆಡ್ಡಿ ಹಾಗೂ ರಂಗಾರೆಡ್ಡಿ ಬಂಧಿತ ಆರೋಪಿಗಳು. ಬಂಧಿತರಿಂದ ₹10 ಲಕ್ಷ ಮೌಲ್ಯದ ಹತ್ತಿಬೀಜದ ಪ್ಯಾಕೇಟ್‌ಗಳು, ₹19,500 ನಗದು ಹಾಗೂ ಎರಡು ಜೀಪ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

‘ನ್ಯೂ ರಘು–39 ಡಬಲ್‌ ಗಾರ್ಡ್‌–2 ಮತ್ತು ಬಲ್ಲಾ’ ಕಂಪೆನಿ ಹೆಸರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಹತ್ತಿ ಬೀಜಗಳನ್ನು ಆರೋಪಿಗಳನ್ನು ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸಿಂಧನೂರು ತಾಲ್ಲೂಕು ತುರ್ವಿಹಾಳ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷೆನ್‌ 420 ದಾಖಲು ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು