ಸಿರವಾರ: ಪಟ್ಟಣದ ಶಾಂತಿನಿಕೇತನ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ಬುಲ್ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಶಾಲೆಯ ಪ್ರಾಚಾರ್ಯೆ ಮತ್ತು ಗೈಡ್ ಕ್ಯಾಪ್ಟನ್ ಯು.ಅನುರಾಧಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ ಪಿಒಪಿ ಗಣೇಶ ಮೂರ್ತಿಗಳನ್ನು ಬಳಸುವುದರಿಂದ ಆಗುವ ಹಾನಿ ಹಾಗೂ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಮಣ್ಣು ಮತ್ತು ವಿವಿಧ ಧಾನ್ಯಗಳನ್ನು ಉಪಯೋಗಿಸಿ ಆಕರ್ಷಕ ಪರಿಸರ ಸ್ನೇಹಿ ಗಣೇಶ ವಿಗ್ರಹಗಳು ತಯಾರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಫ್ಲಾಕ ನಾಯಕಿ ಉಮಾದೇವಿ ಚೌಹಾಣ್, ಬಸ್ಸಯ್ಯ ಸ್ವಾಮಿ ಹಿರೇಮಠ ಹಾಗೂ ಶಾಲೆಯ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.