ಲಿಂಗಸುಗೂರು: ‘ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ’ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಪಟ್ಟಣದಲ್ಲಿ ಶನಿವಾರ ವೀರಶೈವ ವಿದ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಸರ್ದಾರ ವಲ್ಲಭಭಾಯಿ ಪಟೇಲ್ ಹಾಸ್ಟೆಲ್ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರ ಮಾಡಲಾರದ ಕೆಲಸವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು, ಮಠ ಮಾನ್ಯಗಳು ಮಾಡುತ್ತಾ ಬಂದಿವೆ. ವಿದ್ಯೆ ಜತೆ ಅನ್ನದಾಸೋಹ ಮಾಡುವ ಮೂಲಕ ಬಡವಿದ್ಯಾರ್ಥಿಗಳಿಗೆ ಶಿಕ್ಷಣ ನಿಲುಕುವಂತೆ ಮಾಡಿವೆ. ನೌಕರಿ ಮಾಡುವ ಗುರಿ ಬದಲು ನೌಕರಿ ನೀಡುವ ಗುರಿ ಇಟ್ಟು ಅದಕ್ಕೆ ಕಠಿಣ ಪರಿಶ್ರಮ ಪಡಬೇಕು’ ಎಂದರು.

‘ಶಿಕ್ಷಣ ಸಂಸ್ಥೆ ನಡೆಸುವುದು ಸುಲಭದ ಮಾತಲ್ಲ, ವೀರಶೈವ ವಿದ್ಯಾವರ್ಧಕ ಸಂಘದಲ್ಲಿ 4 ಸಾವಿರ ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿರುವು ಇಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ’ ಎಂದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿ ಡಿ.ವಿ.ಪರಮಶಿವಮೂರ್ತಿ ಮಾತನಾಡಿ, ‘ಮೈಸೂರು ಭಾಗದ ಅಭಿವೃದ್ಧಿಗೆ ಹೋಲಿಕೆ ಮಾಡಿದರೆ ಕಲ್ಯಾಣ ಕರ್ನಾಟಕ 15 ವರ್ಷ ಹಿಂದಿದೆ. ಈ ಭಾಗದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯಾಗಿ ಯುವಕರು ಉನ್ನತ ಶಿಕ್ಷಣ ಪಡೆಯುತ್ತಿರುವುದರಿಂದ ಈ ಭಾಗದಲ್ಲಿ ಅಭಿವೃದ್ಧಿಯಾಗುತ್ತಿದೆ’ ಎಂದರು.

ಕಲ್ಯಾಣ ಸ್ಮರಣ ಗ್ರಂಥವನ್ನು ಶಾಸಕ ಮಾನಪ್ಪ ವಜ್ಜಲ್ ಬಿಡುಗಡೆಗೊಳಿಸಿದರು.

ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ ಬಯ್ಯಾಪುರ, ಶಶಿಲ್ ನಮೋಶಿ, ವಿವಿ ಸಂಘದ ಕಾರ್ಯದರ್ಶಿ ಭೂಪನಗೌಡ ಕರಡಕಲ್ಲು, ಆಡಳಿತಾಧಿಕಾರಿ ಬಸವಂತರಾಯ ಕುರಿ, ಪ್ರಾಚಾರ್ಯ ಬಸವರಾಜ ಮೇಟಿ, ವೀರೇಶ ಪವಾರ್, ಪ್ರಭುರಾಜ ಮಾಲಿಪಾಟೀಲ ಹಾಗೂ ಇನ್ನಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.