ಲಿಂಗಸುಗೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಸಂಭ್ರಮದ ಪ್ರಯುಕ್ತ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಮೆರಿಟ್ ಆಧಾರದಲ್ಲಿ ಹಾಗೂ ಪಾರದರ್ಶಕತೆಯಿಂದ ನೇಮಕಾತಿ ಮಾಡುತ್ತಿರುವುದರಿಂದ ಯಾರು ಉತ್ತಮವಾಗಿ ಓದುತ್ತಾರೋ ಅವರಿಗೆ ಉತ್ತಮ ಭವಿಷ್ಯ ರೂಪಿಸಲಾಗುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮವಹಿಸಬೇಕು’ ಎಂದ ಅವರು, ‘ವಿವಿ ಸಂಘ 25 ವರ್ಷ ಪೂರೈಸಿದ್ದಕ್ಕೆ ಇಲ್ಲಿನ ಆಡಳಿತ ಮಂಡಳಿ ಸದಸ್ಯರ ನಿಸ್ವಾರ್ಥ ಸೇವೆ ಪ್ರಮುಖ ಕಾರಣ’ ಎಂದರು.

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ, ಉಪಾಧ್ಯಕ್ಷ ಮಲ್ಲೇಶಗೌಡ ಮಟ್ಟೂರು ಹಾಗೂ ಇನ್ನಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.