ರಾಯಚೂರು: ‘ ಜೀವನದಲ್ಲಿ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸುವ ಎಲ್ಲ ಸಮಸ್ಯೆಗಳಿಗೂ ಉತ್ತಮ ಶಿಕ್ಷಣವೊಂದೇ ಪರಿಹಾರ ಆಗಬಲ್ಲದು’ ಎಂದು ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಹೇಳಿದರು.

ನಗರದ ಸರ್ಕಾರಿ ಪರಿವೀಕ್ಷಣಾಲಯದ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಪಾಸಾದ ಬಾಲ ಮಂದಿರದ ಮಕ್ಕಳಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವ್ಯಕ್ತಿಯ ಯಾವುದೇ ತರಹದ ಸಮಸ್ಯೆಗಳಿಗೆ ಉತ್ತಮ ಶಿಕ್ಷಣ ಮಾತ್ರ ಪರಿಹಾರ ನೀಡಬಲ್ಲದು. ಆದ್ದರಿಂದ ಮಕ್ಕಳು ಉತ್ತಮವಾಗಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು’ ಎಂದು ಸಲಹೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಮಂಗಳಾ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಡಿವೈಎಸ್ಪಿ ಶಾಂತವೀರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ ಹಾವಿನ್, ಸ್ಟೇಷನ್ ಬಜಾರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಾಧಾದೇವಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಬಸವರಾಜ್ ಬ್ಯಾಗವಟ್ ಮಾತನಾಡಿದರು.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಶಾರದಾ ಪಾಟೀಲ, ವಿವಿಧ ಸಂಸ್ಥೆಗಳ ಅಧೀಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಭಾರತಿ ನಾಯಕ ಸ್ವಾಗತಿಸಿದರು. ಬಾಲಕರ ಬಾಲ ಮಂದಿರದ ಅಧೀಕ್ಷಕ ನಾಗರಾಜ್ ನಾಯಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.