ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಪೋಟಿಯಿಂದಾಗಿ ಗುಣಮಟ್ಟದ ಶಿಕ್ಷಣ: ಶಾಸಕ

‘ಕುಸ್ಮಾ’ದಿಂದ ಶಿಕ್ಷಕರ ದಿನಾಚರಣೆ, ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
Last Updated 24 ಸೆಪ್ಟೆಂಬರ್ 2022, 13:04 IST
ಅಕ್ಷರ ಗಾತ್ರ

ರಾಯಚೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ಮಧ್ಯೆ ಪೈಪೋಟಿ ಇರುವುದರಿಂದ ರಾಯಚೂರಿನಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸಾಧ್ಯವಾಗುತ್ತಿದೆ ಎಂದು ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ)ದಿಂದ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕ, ಶಿಕ್ಷಕಿಯರಿಗೆ ಮತ್ತು ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಬೆಳವಣಿಗೆಗೆ ಕಾರಣವಾಗುವ ಜೊತೆಯಲ್ಲೇ ಉತ್ತಮ ಸಾಮಾಜಿಕ ಸೇವೆ ಸಲ್ಲಿಸುತ್ತಿವೆ. ಇದುವರೆಗೂ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ₹3 ಕೋಟಿ ಅನುದಾನ ನೀಡಿದ್ದೇನೆ ಎಂದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಯಲ್ಲೇ ಬೌದ್ಧಿಕತೆ ವಿಕಸನಗೊಳಿಸುವ ಕಾರ್ಯ ಮಾಡುವುದು ಅಗತ್ಯವಿದೆ. ಇದರಿಂದ ಮಾತ್ರ ಭವಿಷ್ಯದಲ್ಲಿ ವಿದ್ಯಾರ್ಥಿಗಳು ಉನ್ನತ ಸ್ಥಾನಗಳಿಗೆ ತಲುಪುವುದಕ್ಕೆ ಸಾಧ್ಯವಾಗುತ್ತದೆ. ಉತ್ತಮ ಶಿಕ್ಷಣದ ಮೂಲಕ ಪ್ರತಿ ವಿದ್ಯಾರ್ಥಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಾಮಾಣಿಕ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು.

ಶಿಕ್ಷಕರು ಒತ್ತಡವಿಲ್ಲದೆ ಪಾಠ, ಪ್ರವಚನ ಮಾಡುವಂತಾಗಬೇಕು. ಹೀಗಾಗಿ ಶಿಕ್ಷಕರಿಗೆ ಯೋಗ್ಯ ರೀತಿಯಲ್ಲಿ ವೇತನ ನೀಡುವ ಕೆಲಸವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ಸಲಹೆ ನೀಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದಿರುವ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ತಲುಪಿದ ಉದಾಹರಣೆಗಳಿವೆ ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುವಂತೆ ಮಾಡಲು ಪೋಷಕರು ತಮ್ಮ ಮನೆಗಳಲ್ಲಿ ಜವಾಬ್ದಾರಿ ನಿರ್ವಹಿಸುತ್ತಾರೆ. ಅದೇ ರೀತಿ ಶಾಲೆಗಳಲ್ಲಿ ಶಿಕ್ಷಕರು ಕೂಡಾ ಜವಾಬ್ದಾರಿ ನಿಭಾಯಿಸಿ ಉತ್ತಮ ಶಿಕ್ಷಣ ಕೊಡಬೇಕು. ನೈತಿಕತೆ ಕಲಿಸಿ ಕೊಡಬೇಕು ಎಂದು ತಿಳಿಸಿದರು.

ಸೋಮವಾರಪೇಟೆ ಹಿರೇಮಠದ ರಾಚೋಟಿವೀರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಶಾಸಕ ಬಸನಗೌಡ ದದ್ದಲ, ಕುಸ್ಮಾ ಅಧ್ಯಕ್ಷ ಎಸ್‌.ಎಲ್‌.ಕೇಶವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ ಮತ್ತಿತರರು ಇದ್ದರು.

ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕ, ಶಿಕ್ಷಕಿಯರಿಗೆ ಹಾಗೂ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT