ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಶಾಕಿರಣ: ಪರಿಣಮಕಾರಿಯಾಗಿ ಅನುಷ್ಠಾನಗೊಳಿಸಿ‘

Published 19 ಜನವರಿ 2024, 16:28 IST
Last Updated 19 ಜನವರಿ 2024, 16:28 IST
ಅಕ್ಷರ ಗಾತ್ರ

ರಾಯಚೂರು: ‘ಜಿಲ್ಲೆಯಲ್ಲಿ ಆಶಾ ಕಿರಣ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಶ್ರಮಿಸಬೇಕು' ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆಶಾಕಿರಣ ಯೋಜನೆಯ ಅನುಷ್ಠಾನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಆಶಾಕಿರಣ ಯೋಜನೆಯಡಿ ಸಾರ್ವಜನಿಕರ ಪ್ರಾಥಮಿಕ ಕಣ್ಣಿನ ತಪಾಸಣೆ ನಡೆಸಲು ಆಶಾ, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಬೇಕು. ನೇತ್ರ ದೃಷ್ಟಿ ಸೇರಿದಂತೆ ವಿವಿಧ ಅಂಶಗಳ ಮೌಲ್ಯಮಾಪನ ಮಾಡಬೇಕು. ಕಣ್ಣಿನ ಸಮಸ್ಯೆ ಇರುವವರಿಗೆ ನಿರ್ದಿಷ್ಟ ತಪಾಸಣೆ ಮಾಡಿಸಿಕೊಳ್ಳಲು ಎರಡನೇ ಬಾರಿ ತಪಾಸಣೆಗೆ ಒಳಪಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಇದೇ ವೇಳೆ ಆಶಾಕಿರಣ ಯೋಜನೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಶಿವಕುಮಾರ, ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್, ಜಿಲ್ಲಾ ಮಲೇರಿಯಾ ಹಾಗೂ ಅಂಧತ್ವ ನಿಯಂತ್ರಣಾಧಿಕಾರಿ ಚಂದ್ರಶೇಖರಯ್ಯ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶರಣಮ್ಮ  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT