ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮರ್ಥ ನಿರ್ವಹಣೆಯಿಂದ ಮಹಿಳಾ ಮೀಸಲಿಗೆ ಗೌರವ’

ಬಿ.ಆರ್.ಬಿ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ
Last Updated 6 ಫೆಬ್ರುವರಿ 2019, 14:48 IST
ಅಕ್ಷರ ಗಾತ್ರ

ರಾಯಚೂರು: ಆಧುನಿಕ ಯುಗದಲ್ಲಿ ಲಭ್ಯವಾಗುವ ಅವಕಾಶಗಳನ್ನು ಮಹಿಳೆಯರು ಸಮರ್ಥವಾಗಿ ನಿಭಾಯಿಸಬೇಕು. ಇದರಿಂದ ಮಹಿಳಾ ಮೀಸಲಾತಿಗೆ ಗೌರವ ಬರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.

ನಗರದ ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೇಠ್ ಚುನಿಲಾಲ ಅಮರಚಂದ ಬೋಹರಾ) ಕಾನೂನು ಮಹಾವಿದ್ಯಾಲಯ ಬುಧವಾರ ಏರ್ಪಡಿಸಿದ್ದ ’ಒಂದು ದಿನದ ಮಹಿಳಾ ಸಾಂಸ್ಕೃತಿಕ ಉತ್ಸವ-2019’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ತುಂಬಾ ಮುಖ್ಯ. ಬರೀ ಪಠ್ಯಪುಸ್ತಕ ಓದುವುದಕ್ಕೆ ಸಿಮೀತವಾಗಬಾರದು ಎಂದರು.

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳಬೇಕು, ಸೋತವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಓದುವ ಆಸಕ್ತಿ ಉಳಿಯುವುದಕ್ಕೆ ಇದು ಅಗತ್ಯ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕಾರ್ಯದರ್ಶಿ ವಿಜಯಕುಮಾರ್‌ ಮಟಮಾರಿ ಮಾತನಾಡಿ, ಮಹಿಳಾ ಸಾಂಸ್ಕೃತಿಕ ಉತ್ಸವದ ಉದ್ದೇಶವನ್ನು ವಿವರಿಸಿದರು.

ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವೀರಭದ್ರಪ್ಪ, ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಪದ್ಮಾ ಜಾಗೀರದಾರ್, ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಚನ್ನಬಸಯ್ಯ ಹುನಕುಂಟಿಮಠ, ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಇದ್ದರು.

ಮಹಾಲಕ್ಷ್ಮೀ ಪ್ರಾರ್ಥಿಸಿದರು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ. ನೀಲಮ್ಮ ಸ್ವಾಗತಿಸಿದರು. ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಸಹ-ಪ್ರಾಧ್ಯಾಪಕಿ ವಸುಂಧರಾ ಪಾಟೀಲ ನಿರೂಪಿಸಿದರು. ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಸಹ-ಪಾಧ್ಯಾಪಕ ಡಾ.ಚನ್ನಬಸಯ್ಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT