ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂವಿಧಾನ ವಿರೋಧಿ, ರಕ್ಷಕರ ನಡುವಿನ ಚುನಾವಣೆ; ಎಚ್. ಆಂಜನೇಯ

Published 1 ಮೇ 2024, 15:28 IST
Last Updated 1 ಮೇ 2024, 15:28 IST
ಅಕ್ಷರ ಗಾತ್ರ

ರಾಯಚೂರು: ‘ಪ್ರಸ್ತುತ ಬಡವರ ಮತ್ತು ಉಳ್ಳವರ, ಸಂವಿಧಾನ ನಾಶ ಮಾಡುವ ಹಾಗೂ ರಕ್ಷಣೆ ಮಾಡುವವರ ನಡುವಿನ ಚುನಾವಣೆಯಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೆಸೆದು ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

‘2014ರಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ ಜನಪರ ಆಡಳಿತ ನಡೆಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದು 10 ವರ್ಷ ಆಡಳಿತ ನಡೆಸಿದರೂ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ‘ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಟೀಕಿಸಿದರು.

‘ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಜಾರಿಗೆ ತಂದಿದ್ದು, ಮಹಿಳಾ ಮತದಾರರು ಕಾಂಗ್ರೆಸ್ ಗೆ ಮತ ಗ್ಯಾರಂಟಿ ನೀಡಿದ್ದಾರೆ. ಬಿಜೆಪಿಯವರು ಬಡವರಿಗೆ ನೀಡಿದ ಕಾರ್ಯಕ್ರಮವನ್ನು ಬಿಟ್ಟಿ ಭಾಗ್ಯವೆಂದು ಅಪಹಾಸ್ಯ ಮಾಡುತ್ತಿದ್ದಾರೆ. ಬಡವರ ಪರ ಕಾಳಜಿ ಕಾಂಗ್ರೆಸ್ ಗೆ ಮಾತ್ರ ಇದೆ’ ಎಂದು ಹೇಳಿದರು.

‘ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಹೊರಗಿನ ವ್ಯಕ್ತಿ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯ ಅನೇಕ ನಾಯಕರು ಹೊರಗಿನಿಂದ ಸ್ಪರ್ಧಿಸುತ್ತಿದ್ದಾರೆ. ಪಕ್ಷದಲ್ಲಿ ಎಲ್ಲೂ ಕುಮಾರ ನಾಯಕರನ್ನು ಬೆಂಬಲಿಸಿ ಶ್ರಮಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಸಮರ್ಥ ಪೈಪೋಟಿ ನೀಡಲಿದ್ದಾರೆ’ ಎಂದು ತಿಳಿಸಿದರು.

‘ಬಿಜೆಪಿಯಿಂದ ‍ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ಗ್ಯಾರಂಟಿ ಯೊಜನೆಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಸಮಾನ ಅವಕಾಶ ನೀಡುತ್ತೇವೆ’ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ನಗರಸಭೆ ಸದಸ್ಯ ಜಯಣ್ಣ, ಬಸವರಾಜ ರೆಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT