ಸೋಮವಾರ, ಸೆಪ್ಟೆಂಬರ್ 27, 2021
29 °C

ಪಾಮನಕಲ್ಲೂರು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾಮನಕಲ್ಲೂರು (ಕವಿತಾಳ): ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು.

ಅಧ್ಯಕ್ಷರಾಗಿ ಗುಡಿಹಾಳ ಗ್ರಾಮದ ರಾಜಾಸಾಬ್‍ (ಸಾಮಾನ್ಯ) ಮತ್ತು ಉಪಾಧ್ಯಕ್ಷರಾಗಿ ಆನಂದಗಲ್‍ ಗ್ರಾಮದ ತಿಮ್ಮಮ್ಮ ವೆಂಕಟೇಶ (ಪರಿಶಿಷ್ಟ ಪಂಗಡ ಮಹಿಳೆ) ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 26 ಜನ ಸದಸ್ಯ ಬಲ ಹೊಂದಿದ್ದು 7 ಜನ ಸದಸ್ಯರು ಗೈರಾಗಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆಗಿದ್ದ ತಹಶೀಲ್ದಾರ್ ಕವಿತಾ. ಆರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು