ಶನಿವಾರ, ಸೆಪ್ಟೆಂಬರ್ 18, 2021
23 °C

ಅಭಿವೃದ್ಧಿಗೆ ಎಂಜಿನಿಯರುಗಳ ಪಾತ್ರ ಮುಖ್ಯ: ಡಾ. ಎಂ.ಜಿ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ದೇಶದ ಬೆನ್ನೆಲುಬು ಎಂದು ಕರೆಯುವ ಕೃಷಿ ಕ್ಷೇತ್ರಕ್ಕೆ ಎಂಜಿನಿಯರುಗಳ ಪಾತ್ರ ಮುಖ್ಯವಾಗಿದೆ. ಇವರು ದೇಶ ಸದೃಢಗೊಳ್ಳುವಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ವಿಶ್ವವಿದ್ಯಾಲಯ, ಕೃಷಿ ತಾಂತ್ರಿಕ ಮಹಾವಿದ್ಯಾಲಯದಿಂದ ಬುಧವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ, ಕನ್ನಡ ಸಂಘ ಮತ್ತು ಅಭಿಯಂತರರ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಎಂಜಿನಿಯರ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಂಘ ಸ್ಥಾಪಿಸಿದ್ದು, ಸರ್ಕಾರ ಹೊರಡಿಸುವ ಕನ್ನಡ ಕಾರ್ಯಕ್ರಮಗಳನ್ನು ಸಂಘ ಜಾರಿಗೆ ತರಬೇಕು. ಕನ್ನಡ ಕುರಿತ ರೂಪುರೇಷೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ‌ನೀಡಲಾಗುವುದು ಎಂದರು. ಲೋಕೇಶ್ವರ ರಾವ್ ಕಾಳೆ ಮಾತನಾಡಿದರು.

ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ.ಎಂ.ನೇಮಿಚಂದ್ರಪ್ಪ, ಡಾ.ಎಂ.ವೀರನಗೌಡ, ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಾರೂಢ ಬಿ.ಪಾಟೀಲ, ಮಹಾಂತೇಶ ಗಾಣಿಗಿ, ಕರಿಬಸವರಾಜ ಕರಿಗೌಡ್ರು, ಪಿ.ದಿವ್ಯ ಸೇರಿದಂತೆ ಉಪನ್ಯಾಸಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು