ಸೋಮವಾರ, ಏಪ್ರಿಲ್ 19, 2021
32 °C

ಪರಿಸರ ಸಂರಕ್ಷಣೆ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಸಿರವಾರ: 'ಹೊಲಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕೆಲಸ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಂತೆ ರೈತ ಕ್ಷೇತ್ರದಲ್ಲೂ ಮಹಿಳೆಯರೇ ಮುಂದೆ ಇದ್ದಾರೆ' ಎಂದು  ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾ ಸಂಚಾಲಕಿ ರೂಪಾ ಶ್ರೀನಿವಾಸ ನಾಯಕ ಹೇಳಿದರು.

ತಾಲ್ಲೂಕಿನ ನವಲಕಲ್ಲು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮಹಿಳಾ ಗ್ರಾಮ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು ಸಂಚಾಲಕಿ ಅನಿತಾ ಬಸವರಾಜ ಮಂತ್ರಿ ಮಾತನಾಡಿದರು.

ಪ್ರತಿಯೊಬ್ಬ ಮಹಿಳೆಗೆ ಸಸಿ ವಿತರಿಸುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಖಾಜನಗೌಡ, ಗ್ರಾಮ ಘಟಕದ ಅಧ್ಯಕ್ಷ ರಾಜಶೇಖರ ಸ್ವಾಮಿ, ನವಲಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಶಿವರಾಜ, ಉಮಾದೇವಿ ನಾಯಕ, ರಾಜ ಮಡಿವಾಳ, ನಾಗರಾಜ, ವಿಜಯ ಬಡಿಗೇರ, ಲಕ್ಷ್ಮಣ್ ಹಾಗೂ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.