ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕೆ ಸಹಕರಿಸಿ’

Published 8 ಜೂನ್ 2023, 11:29 IST
Last Updated 8 ಜೂನ್ 2023, 11:29 IST
ಅಕ್ಷರ ಗಾತ್ರ

ಸಿಂಧನೂರು: ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು, ಮಹಿಳೆಯರು, ವಿದ್ಯಾರ್ಥಿ-ಯುವಜನರು ಹಾಗೂ ವಿವಿಧ ಸಮುದಾಯ ಸೇರಿಕೊಂಡು ಸಿಂಧನೂರು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಮನವಿ ಮಾಡಿದರು.

ನಗರದ ದೊಡ್ಡ ಕೆರೆಯ ಆವರಣದಲ್ಲಿ ನಗರಸಭೆ ಕಾರ್ಯಾಲಯ, ಸಾಧನಾ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಗರಸಭೆಯ ಕಿರಿಯ ಅಭಿಯಂತರ ಮಹೇಶ್ ಅಂಗಡಿ, ಆರೋಗ್ಯ ನಿರೀಕ್ಷಕರಾದ ಲಕ್ಷ್ಮಿಪತಿ, ಸಮುದಾಯ ಅಧಿಕಾರಿ ದುರಗಪ್ಪ, ಸಾಧನಾ ಸಂಸ್ಥೆಯ ಜಿಲ್ಲಾ ಸಂಚಾಲಕ ಸುರೇಶರೆಡ್ಡಿ ವಿರೂಪಾಪುರ, ಉಪಾಧ್ಯಕ್ಷ ಮಲ್ಲಿಕಾರ್ಜುನ ಜಾಲವಾಡಗಿ ಹಾಗೂ ಪೌರ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT