ಶುಕ್ರವಾರ, ಅಕ್ಟೋಬರ್ 30, 2020
26 °C

ಕಾಂಗ್ರೆಸ್‌ ಗೆಲುವಿನ ಮನ್ಸೂಚನೆಯಿಂದ ಸಿಬಿಐ ದಾಳಿ: ಈಶ್ವರ ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ‘ರಾಜ್ಯದಲ್ಲಿ ಶಿರಾ, ರಾಜರಾಜೇಶ್ವರಿ ನಗರ ಸೇರಿದಂತೆ ಕೆಲವು ಕಡೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತದೆ ಎನ್ನುವ ಮನ್ಸೂಚನೆ ಅರಿತು, ಕಾಂಗ್ರೆಸ್‌ ರಾಜ್ಯಾದ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಬಿಜೆಪಿ ವಾಮಮಾರ್ಗದಿಂದ ಚುನಾವಣೆ ಗೆಲ್ಲುವುದಕ್ಕೆ ಕುತಂತ್ರ ನಡೆಸಿದೆ. ಆಡಳಿತ ನಡೆಸುವ ಪಕ್ಷದ ಏಜೆಂಟ್‌ರಂತೆ, ಪಂಜರದ ಗಿಳಿಯಂತೆ ಸಿಬಿಐ ಅಧಿಕಾರಿಗಳು ವರ್ತಿಸಬಾರದು. ಎಲ್ಲ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ’ ಎಂದರು.

‘ಮಸ್ಕಿ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಎದುರಿಸುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು