ಗುರುವಾರ , ಮೇ 13, 2021
16 °C

ರಾಯಚೂರು: ಅಗತ್ಯವಸ್ತುಗಳ ಮಳಿಗೆಗಳು ಮಾತ್ರ ಓಪನ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.

ಕೆಲವು‌ ಮಳಿಗೆಗಳ‌ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ರಾಯಚೂರು ನಗರದಲ್ಲಿಯೇ  ಕೊರೊನಾ ಸೋಂಕು ವೇಗವಾಗಿ ಹರಡಿಕೊಳ್ಳುತ್ತಿರುವುದರಿಂದ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ.

ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಾದ ಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಮಸ್ಕಿಯಲ್ಲಿ ಎಂದಿನಂತೆ ವ್ಯಾಪಾರ ಮಳಿಗೆಗೆ ಅವಕಾಶ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಬಂದ್ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಗುರುವಾರ ಒಂದೇ ‌ದಿನ‌ 500 ಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು