ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಸ್ಥಾಪನೆ: ಜಿಲ್ಲಾಧಿಕಾರಿ ನಿತೀಶ

Published : 27 ಆಗಸ್ಟ್ 2024, 15:40 IST
Last Updated : 27 ಆಗಸ್ಟ್ 2024, 15:40 IST
ಫಾಲೋ ಮಾಡಿ
Comments

ರಾಯಚೂರು: ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಜಿಲ್ಲಾಧಿಕಾರಿ ನಿತೀಶ ಕೆ. ತಿಳಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರೆಗೆ 3ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‍ಗೆ ₹7,280ರಂತೆ ಬೆಂಬಲ ಯೋಜನೆಯಡಿಯಲ್ಲಿ ಖರೀದಿಸಲಾಗುವುದು. ಇದೇ 2024ರ ಆ.24ರಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ.

ರೈತರಿಂದ ಸೂರ್ಯಕಾಂತಿಯನ್ನು ರಾಯಚೂರು ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಹುಣಸಿಹಾಳಹುಡಾ, ಖರೀದಿ ಕೇಂದ್ರ ಕಾರ್ಯದರ್ಶಿ ಷಣ್ಮುಖ.ಜಿ ಮೊಬೈಲ್ : 9743695467, ದೇವದುರ್ಗ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಜಾಲಹಳ್ಳಿ ಖರೀದಿ ಕೇಂದ್ರದ ಕಾರ್ಯದರ್ಶಿ ನರಸಿಂಗ್ ನಾಯಕ ಮೊಬೈಲ್: 7899312989, ಲಿಂಗಸುಗೂರು ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಮಟ್ಟೂರು ಖರೀದಿ ಕೇಂದ್ರ ಕಾರ್ಯದರ್ಶಿ ವೀರೇಶ ದೇಸಾಯಿ ಮೊಬೈಲ್: 9113649836, ಸಿಂಧನೂರು ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಜವಳಗೇರಾ ಖರೀದಿ ಕೇಂದ್ರದ ಕಾರ್ಯದರ್ಶಿ ದೇವರಾಜ ಮೊಬೈಲ್: 9964165509 ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಹುಡಾ ಖರೀದಿ ಕೇಂದ್ರದ ಕಾರ್ಯದರ್ಶಿ ಚನ್ನನಗೌಡ ಮೊಬೈಲ್ 9964315868, ಮಾನ್ವಿ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ತೋರಣದಿನ್ನಿ ಖರೀದಿ ಕೇಂದ್ರ ಕಾರ್ಯದರ್ಶಿ ಬಸಯ್ಯ .ಟಿ ಮೊಬೈಲ್: 9902387316, ಸಿರವಾರ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಸಿರವಾರ ಖರೀದಿ ಕೇಂದ್ರದ ಕಾರ್ಯದರ್ಶಿ ನಿಂಬಯ್ಯ ಸ್ವಾಮಿ ಮೊಬೈಲ್: 9880891919ಗಳಲ್ಲಿ ಖರಿದಿ ಕೇಂದ್ರಗಳನ್ನು ತೆರೆಯಲಾಗಿದೆ.

ರೈತರು ಫ್ರೂಟ್ಸ್ ಐ.ಡಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT