ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಹಳ್ಳಿಯಲ್ಲೂ ಅಧಿಕಾರ ಸಿಗಬೇಕು: ಡಿಸಿಎಂ

ಮಸ್ಕಿಯಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ
Last Updated 30 ನವೆಂಬರ್ 2020, 13:06 IST
ಅಕ್ಷರ ಗಾತ್ರ

ಮಸ್ಕಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ಮುಟ್ಟಬೇಕಾದರೆ ಪ್ರತಿ ಗ್ರಾಮ ಪಂಚಾಯಿತಿ ಅಧಿಕಾರ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನ ಕೈಗೆ ಸಿಗಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಬಿಜೆಪಿ ಸೋಮವಾರ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಶಾಸಕರು ಹಾಗೂ ಸಂಸದರನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರ ಶ್ರಮ ದೊಡ್ಡದಾಗಿದೆ. ಕಾರ್ಯಕರ್ತರಿಗೂ ಕೂಡಾ ಅಧಿಕಾರ ಸಿಗುವಂತೆ ಮಾಡಲು ಬಿಜೆಪಿ ನಾಯಕರು ಶ್ರಮಿಸೋಣ.ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡು ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಗ್ರಾಮ ಪಂಚಾಯಿತಿಗೆ ಆಯ್ಕೆ ಮಾಡೋಣ ಎಂದರು.

ಮಸ್ಕಿ ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದಲೇ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.

ಸಮಾಜ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ರಾಜ್ಯದಲ್ಲಿಯೂ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ. ಮುಂಬರುವ ಮಸ್ಕಿ ಉಪ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಗೆದ್ದು ಸಚಿವರಾಗುವುದು ಖಚಿತ ಎಂದರು.
ಅರಣ್ಯ ಖಾತೆ ಸಚಿವ ಆನಂದ ಸಿಂಗ್ ಮಾತನಾಡಿ,ಶಾಸಕರು, ಸಂದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಇದೆ. ಮಹಾತ್ಮ ಗಾಂಧೀಜಿ ಕನಸಿದ ಗ್ರಾಮ ಸ್ವರಾಜ್ಯ ಅನುಷ್ಠಾನ ಪ್ರಧಾನಿ ನರೇಂದ್ರ ಮೋದಿಯಿಂದ ಸಾಕಾರಗೊಳ್ಳುತ್ತದೆ ಎಂದು ತಿಳಿಸಿದರು.

ಸಂಸದರಾದ ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ದೇವೆಂದ್ರಪ್ಪ ನಾಯಕ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಾನಂದ ಯಾದವ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಹಾದಿಮನಿ ವೀರಲಕ್ಷ್ಮೀ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT