‘ಪ್ರತಿಯೊಬ್ಬರೂ ರಕ್ತದಾನದ ಸಂಕಲ್ಪ ಮಾಡಿ’

ಬುಧವಾರ, ಜೂನ್ 19, 2019
30 °C
ವಿಶ್ವ ರಕ್ತದಾನಿಗಳ ದಿನಾಚರಣೆ, ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ

‘ಪ್ರತಿಯೊಬ್ಬರೂ ರಕ್ತದಾನದ ಸಂಕಲ್ಪ ಮಾಡಿ’

Published:
Updated:
Prajavani

ರಾಯಚೂರು: ರಕ್ತದಾನ ಮಹಾ ದಾನವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡುವ ಸಂಕಲ್ಪ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಶಿಲ್ಪಾ ಶರ್ಮಾ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮಲೇರಿಯಾ ಅಧಿಕಾರಿ ಕಚೇರಿ, ರಿಮ್ಸ್‌ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸಂಸ್ಥೆಗಳಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಮಲೇರಿಯಾ ವಿರೋಧಿ ಮಾಸಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಪಘಾತ, ತುರ್ತು ಶಸ್ತ್ರ ಚಿಕಿತ್ಸೆ ಹಾಗೂ ಇತರೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಆದ್ದರಿಂದ ರಕ್ತಕ್ಕೆ ನಿರಂತರವಾಗಿ ಬೇಡಿಕೆ ಇರುತ್ತದೆ. ಲಿಂಗಬೇಧವಿಲ್ಲದೆ 18ರಿಂದ 60 ವರ್ಷದೊಳಗಿನ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ ಎಂದರು.

ಮಲೇರಿಯಾ ರೋಗ ಅನಾಫಿಲೀಸ್‌ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು. ನೀರಿನ ಸಂಗ್ರಹಗಳನ್ನು ಭದ್ರವಾಗಿ ಮುಚ್ಚಿಡಬೇಕು. ರಾತ್ರಿ ಮಲಗುವ ಸಮಯದಲ್ಲಿ ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಂ.ಕೆ.ಎಸ್.ನಸೀರ್, ಡಾ.ರಮೇಶ, ಡಾ.ಕೆ.ವಿಜಯ ಶಂಕರ, ಡಾ.ಸುರೇಂದ್ರಬಾಬು, ಡಾ.ಕೆ.ಗಣೇಶ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಹ್ಮದ್ ಶಾಕೀರ್, ಡಾ.ಸುರೇಶಸಗರದ, ಡಾ.ಬಸನಗೌಡ, ರಿಮ್ಸ್, ನವೋದಯ ವೈದ್ಯರು, ಎಎನ್‍ಎಂ ತರಬೇತಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !