ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಹೆಸರಲ್ಲಿ ನಕಲಿ ಖಾತೆ: ಯುವಕನ ಬಂಧನ

Last Updated 23 ಫೆಬ್ರುವರಿ 2020, 12:50 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಮಹಿಳೆಯೊಬ್ಬರ ಭಾವಚಿತ್ರ ಬಳಸಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಮಾಡಿಕೊಂಡು ಅಶ್ಲೀಲ ಚಿತ್ರ ಮತ್ತು ವಿಡಿಯೋ ಅಪ್‌ಲೋಡ್‌ ಮಾಡಿದ್ದ ಮುರಕಿಗುಡ್ಡಾ ತಾಂಡಾದ ಅಮರೇಶ ಯಂಕಣ್ಣ ಯುವಕನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕೃತ್ಯದಲ್ಲಿ ಇನ್ನೊಬ್ಬ ಆರೋಪಿ ರಾಜು ಪವಾರ ನಾಪತ್ತೆಯಾಗಿದ್ದು, ಶೋಧ ಮುಂದುವರಿಸಲಾಗಿದೆ. ಆರೋಪಿಯು ಖಾತೆ ತೆರೆಯಲು ಬಳಸಿದ್ದ ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ ಜಪ್ತಿ ಮಾಡಿಕೊಂಡಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನೊಂದ ಮಹಿಳೆ ನೀಡಿದ್ದ ದೂರು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT