ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತ ವಿರೋಧಿ ಕಾಯ್ದೆ ಹಿಂಪಡೆಯಲು ರಸ್ತೆತಡೆ’

Last Updated 4 ಡಿಸೆಂಬರ್ 2020, 15:53 IST
ಅಕ್ಷರ ಗಾತ್ರ

ರಾಯಚೂರು: ಭೂ ಸುಧಾರಣೆ ಹಾಗೂ ಇತರೆ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತ ಮುಖಂಡರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ರೈತ ಸಂಘರ್ಷ ಸಮನ್ವಯ ಸಮಿತಿ, ಸಮಾಜ ಪರಿವರ್ತನಾ ಸಮುದಾಯ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ರಸ್ತೆತಡೆ ಚಳವಳಿ ನಡೆಸಿದರು.

ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಹೋರಾಟ ಮಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ವಾಟರ್ ಕ್ಯಾನರ್, ಟಿಯರ್ ಗ್ಯಾಸ್, ಲಾಠೀ ಚಾರ್ಜ್ ಮಾಡುವ ಮೂಲಕ ದೌರ್ಜನ್ಯ ಎಸಗುತ್ತಿರುವುದು ಖಂಡನೀಯ.ಸರ್ಕಾರ ಯಾವುದೇ ಷರತ್ತುಗಳನ್ನು ಒಡ್ಡದೇ ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೃಷಿ ತಿದ್ದುಪಡಿ ಮಸೂದೆ ಮಾಡುತ್ತಿದೆ. ಅಗತ್ಯ ವಸ್ತುಗಳ ತಿದ್ದುಪಡಿ, ವಿದ್ಯುತ್ ತಿದ್ದುಪಡಿ ಮಸೂದೆ, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ‌‌

ಸ್ವಾಮಿನಾಥನ್ ವರದಿ ಜಾರಿಗೊಳಿಸಿ ಕೃಷಿ ಆಯೋಗದ ಕೃಷಿ ಉತ್ಪನ್ನಗಳ ಸಮಗ್ರ ಉತ್ಪನ್ನ ವೆಚ್ಚಕ್ಕೆ ಶೇ 50 ರಷ್ಟು ಲಾಭಾಂಶ ಸೇರಿಸಿ ಬೆಲೆ ಖಾತ್ರಿಪಡಿಸುವ ಕಾಯ್ದೆ ಜಾರಿಗೆ ತರಬೇಕು. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರೈತರ ಸಾಲಮನ್ನಾ, ನಷ್ಠ ಪರಿಹಾರ ನಿಡಿ ಋಣ ಮುಕ್ತ ಕಾಯ್ದೆ ಸಂಸತ್ ನಲ್ಲಿ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.

ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕ ಎಸ್.ಆರ್. ಹಿರೇಮಠ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜನಸಂಗ್ರಾಮ ಪರಿಷತ್ ಸಂಚಾಲಕ ರಾಘವೇಂದ್ರ ಕುಷ್ಠಗಿ, ಡಿ.ಎಸ್. ಶರಣಬಸವ, ಕೆ.ಜಿ ವೀರೇಶ, ಅಮರಣ್ಣ ಗುಡಿಹಾಳ, ಕರಿಯಪ್ಪ ಅಚ್ಚೊಳ್ಳಿ, ಮಲ್ಲಣ್ಣ ದಿನ್ನಿ, ಶರಣಪ್ಪ ಮರಳಿ, ಜಾನ್ ವೆಸ್ಲಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT