ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಸಂಪರ್ಕ ಕೇಂದ್ರ ಮುತ್ತಿಗೆ

Last Updated 4 ಅಕ್ಟೋಬರ್ 2020, 3:33 IST
ಅಕ್ಷರ ಗಾತ್ರ

ಮುದಗಲ್: ಬಿತ್ತನೆ ಬೀಜಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಮುಖಂಡ ಅಮರಣ್ಣ ಗುಡಿಹಾಳ ನೇತೃತ್ವದಲ್ಲಿ ರೈತರು ಇಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಬಿತ್ತನೆ ಬೀಜ ನೀಡಬೇಕೆಂದು ಒತ್ತಾಯಿಸಿದರು.

ಮಳೆಯ ಅವಕೃಪೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಈಗ ಮಳೆ ನಿಂತಿರುವುದರಿಂದ ಬಿತ್ತನೆ ಕಾರ್ಯ ಆರಂಭವಾಗಿದೆ. ಸಂಪರ್ಕ ಕೇಂದ್ರದಿಂದ ಸಮಪರ್ಕವಾಗಿ ಬಿತ್ತನೆ ಬೀಜ ವಿತರಣೆಯಾಗುತ್ತಿಲ್ಲ ಎಂದು ದೂರಿದರು.

ರೈತರು ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ರೈತ ಸಂಪರ್ಕ ಕೇಂದ್ರದಲ್ಲಿ ಇನ್ನೂ ಬೀಜಗಳು ಮಾರಾಟಕ್ಕೆ ಲಭ್ಯವಿಲ್ಲ. ವ್ಯಾಪಾರಸ್ಥರು ಹೆಚ್ಚಿನ ದರದಲ್ಲಿ ಬೀಜಗಳು ಮಾರಾಟ ಮಾಡುತ್ತಿದ್ದಾರೆ. ಇದರಿಂದ ರೈತರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ರೈತರಿಗೆ ಬೀಜ ದೊರೆಯುತ್ತಿಲ್ಲ. ಜಿಲ್ಲಾ ಉಪ ನಿರ್ದೇಶಕರು ಆಗಮಿಸುತ್ತಿದ್ದಾರೆಂದು ಸುಳ್ಳು ಹೇಳಿ ರೈತರನ್ನ ಕಾಯುವಂತೆ ಮಾಡಿದ್ದೀರಿ. ಇನ್ನೆರಡು ದಿನಗಳಲ್ಲಿ ಮುಂಗಾರು ಬೀಜಗಳನ್ನು ವಿತರಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಂತ್ರಿಕ ಕಾರಣಗಳಿಂದ ಬಿತ್ತನೆ ಬೀಜ ವಿತರಣೆಯಲ್ಲಿ ವಿಳಂಬವಾಗಿದೆ. ಇಲಾಖೆಯ ಅಧಿಕಾರಿಗಳ ಚರ್ಚಿಸಿ ಶೀಘ್ರವೇ ರೈತ ಸಂಪರ್ಕ ಕೇಂದ್ರದ ಮೂಲಕ ಬೀಜಗಳನ್ನು ವಿತರಣೆ ಮಾಡುತ್ತೇವೆ ಎಂದು ಮುದಗಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಆಕಾಶ ದಾನಿ ಹೇಳಿದರು.

ಹುಸೇನ್ ನಾಯ್ಕ, ಕಾಸಿಂಸಾಬ ಎಲಿಪುಕ್, ತಿಪ್ಪಣ್ಣ, ಹೊಳೆಯಪ್ಪ, ಭೀಮನಗೌಡ, ಸಹಾಯಕ ಕೃಷಿ ಅಧಿಕಾರಿ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT