ಮಾನ್ವಿ: ತುಂಗಭದ್ರಾ ಎಡದಂಡೆ ನಾಲೆಯ 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ರೈತರು ಪಟ್ಟಣದ ಕರ್ನಾಟಕ ನೀರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘85ನೇ ವಿತರಣಾ ಕಾಲುವೆಗೆ ಸರಿಯಾಗಿ ನೀರು ಬಾರದೇ ಇರುವುದರಿಂದ ಬೆಳೆಗಳು ಒಣಗಿ ರೈತರು ನಷ್ಟ ಅನುಭವಿಸುವ ಆತಂಕ ಎದುರಿಸುತ್ತಿದ್ದಾರೆ. ಬಾರಿ ತುಂಗಭದ್ರಾ ಆಣೆಕಟ್ಟು ಭರ್ತಿಯಾಗಿ ಹೆಚ್ಚಿನ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿತರಣಾ ಕಾಲುವೆಗೆ ನೀರು ಇಲ್ಲದಂತಾಗಿದೆ. ಈ ಕುರಿತು ವಿಚಾರಿಸಿದರೆ ನೀರಾವರಿ ನಿಗಮದ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕೆಲ ಹೊತ್ತು ನೀರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕಳಿತು ವಾಹನಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ತುಂಗಭದ್ರಾ ಎಡದಂಡೆ ನಾಲೆಯ ಮುಖ್ಯ ಕಾಲುವೆಯಲ್ಲಿ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡುವ ಮೂಲಕ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ನಿಗಮದ ಎಇಇ ದಾವೂದ್ ರೈತರ ಮನವಿ ಸ್ವೀಕರಿಸಿದರು. ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವ ಕುರಿತು ಅವರು ಭರವಸೆ ನೀಡಿದರು.

ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್, ರೈತ ಮುಖಂಡರಾದ ಸುರೇಶ ನಾಡಗೌಡ, ಕೆ.ರಾಮಕೃಷ್ಣ, ನರಸಿಂಹ ಹೆಳವರ, ನಾಗರಾಜ ಪೆರಕಲ್, ಅಯ್ಯಪ್ಪ, ಜಲಾಲ್ ಸಾಬ್, ಈರಣ್ಣ, ಯಂಕೋಬ, ಕೆ.ದೇವೇಂದ್ರ, ಲಕ್ಷ್ಮಯ್ಯ ನಾಯಕ, ಶಿವಕುಮಾರ ಭಜಂತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.