ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಶೋಷಣೆ ನಿಲ್ಲಿಸಲಿ; ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

Last Updated 4 ಆಗಸ್ಟ್ 2020, 13:39 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಆಡಳಿತ ಕುಸಿದು ಹೋಗಿದ್ದು ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆಯಾಗುತ್ತಿದೆ. ವೇ ಬ್ರಿಡ್ಜ್ ಗಳಲ್ಲಿ ಮೋಸ ಮಾಡಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.

ಜಿಲ್ಲೆಯ ವಿವಿಧ ಇಲಾಖೆಗಳಿಂದ ರೈತರಿಗೆ ಶೋಷಣೆಯಾಗುತ್ತಿದ್ದು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ನೋಂದಣಿ ಇಲಾಖೆ, ಕಂದಾಯ ಇಲಾಖೆಯಲ್ಲಿ ಭೂ ರಹಿತ ಪ್ರಮಾಣ ಪತ್ರ, ಭೂ ಗೇಣಿ ಪ್ರಮಾಣ ಪತ್ರ, ಭೂ ಹಿಡುವಳಿ ಹಾಗೂ ಇತರೆ ಕೆಲಸಗಳಿಗೆ ಮಧ್ಯವರ್ತಿಗಳಿಲ್ಲದೇ ಯಾವುದೇ ಕೆಲಸ ಆಗುತ್ತಿಲ್ಲ. ರೈತರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮರಳಿ, ಉಪಾಧ್ಯಕ್ಷ ತಿಮ್ಮಣ್ಣ ಭೋವಿ, ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ ನಾಯಕ, ಸಿ.ಎಚ್. ರವಿ, ರಾಮಯ್ಯ ಜವಳಗೇರಾ, ಶಿವರಾಜ ಮಾರಲದಿನ್ನಿ, ವೈ. ಬಸವರಾಜ ನಾಯಕ, ತಾಯಪ್ಪ ಮಸ್ಕಿ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT