ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವದುರ್ಗ: ರೈತರ ದಿನಾಚರಣೆ

Last Updated 24 ಡಿಸೆಂಬರ್ 2019, 13:57 IST
ಅಕ್ಷರ ಗಾತ್ರ

ದೇವದುರ್ಗ: ಆಹಾರ ಉತ್ಪಾದನೆ ಮಸೋದೆ ಸೇರಿ ರೈತ ಸಮುದಾಯದ ಪ್ರಗತಿಗಾಗಿ ಕೃಷಿ ಕ್ರಾಂತಿ ಮಾಡಿದ ಕೀರ್ತಿ ಮಾಜಿ ಪ್ರಧಾನಿ ಚೌಧರಿ ಚರರ್‌ಸಿಂಗ್‌ ಅವರಿಗೆ ಸಲ್ಲುತ್ತದೆ ಎಂದು ತಾಲ್ಲೂಕು ಕೃಷಿಕ ಸಮಾಜದ ಸದಸ್ಯ ಹನುಮರೆಡ್ಡಪ್ಪ ಪಾಟೀಲ ಮಿಯ್ಯಾಪುರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚರಣ್‌ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ದೇಶದ ಎಲ್ಲಡೆ ಆಚರಿಸಲಾಗುತ್ತದೆ ಎಂದರು.

ಜಮೀನ್ದಾರಿ ಪದ್ಧತಿಯಿಂದ ಸಣ್ಣ ರೈತರಿಗೆ ತೊಂದರೆ ಆಗುವುದನ್ನು ಮನಗಂಡಿದ್ದ ಅವರು ಕಿರುಕುಳ ತಪ್ಪಿಸಲು ಕಾನೂನುಗಳನ್ನು ಜಾರಿಗೊಳಿಸಿ ಜಮೀನ್ದಾರಿ ಪದ್ಧತಿಯನ್ನು ನಿರ್ಮೂಲನೆ ಮಾಡಿದರು ಎಂದು ಹೇಳಿದರು.

ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಸವರಾಜ, ಸದಸ್ಯರಾದ ಹನುಮಂತ್ರಾಯ, ಎಂ.ಮೌನೇಶ, ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯಾಂಕ, ಕೃಷಿ ವಿಜ್ಞಾನ ಕೇಂದ್ರದ ಡಾ.ಶ್ರೀವಾಣಿ, ಅಶ್ವತನಾರಾಯಣ, ಕೃಷಿ ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ.ಗಿರೀಶ ಮರಡ್ಡಿ ಹಾಗೂ ಸಿಬ್ಬಂದಿ ಇದ್ದರು. ತಾಲ್ಲೂಕು ಕೃಷಿ ಇಲಾಖೆಯ ವತಿಯಿಂದ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT