ಶನಿವಾರ, ಫೆಬ್ರವರಿ 29, 2020
19 °C

ರಾಯಚೂರು| ಪವನ ವಿದ್ಯುತ್ ಕಂಪೆನಿಗಳಿಂದ ರೈತರಿಗೆ ಮೋಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ರೈತರ ಜಮೀನುಗಳನ್ನು ಬಾಡಿಗೆ ಪಡೆದ ಖಾಸಗಿ ಕಂಪನಿಯೂ ಪವನ ವಿದ್ಯುತ್ ಘಟಕಗಳನ್ನು ಸ್ಥಾಪಿಸಿ, ರೈತರಿಗೆ ಬಾಡಿಗೆ ಹಣ ನೀಡದೇ ವಂಚಿಸಿದ್ದಾರೆ. ಕೂಡಲೇ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಹೈದರಾಬಾದ್ ಮೂಲದ ಗಮೇಶ ಸಂಸ್ಥೆಯು ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಒಟ್ಟು 27 ಕಡೆಗಳಲ್ಲಿ ಪವನ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಆದರೆ, ರೈತರೊಂದಿಗೆ ಮಾಡಿಕೊಂಡ ಒಪ್ಪಂದ ಪ್ರಕಾರ ಹಣ ಪಾವತಿ ಮಾಡಿಲ್ಲ ಎಂದು ದೂರಿದರು.

ಈ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರಿಗೆ ನ್ಯಾಯದೊರಕಿಲ್ಲ. ಪವನ್ ವಿದ್ಯುತ್ ಘಟಕ ಸ್ಥಾಪನೆ ಮಾಡಿದ ಕಂಪೆನಿಯಿಂದ ರೈತರಿಗೆ ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಿ ರೈತರಿಗೆ ಬರಬೇಕಾದ ಹಣವನ್ನು ಕೊಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ, ಶಿವಪ್ಪ ಆಲ್ಕೂರು, ನರಸಪ್ಪ, ಮಹೇಶ, ಶರಣಪ್ಪ, ಬಸವರಾಜ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು