ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಸರ್ಕಾರಕ್ಕೆ ಹಣ ನೀಡಲು ಭಿಕ್ಷೆ ಬೇಡಿದ ರೈತರು!

Last Updated 23 ಅಕ್ಟೋಬರ್ 2020, 8:28 IST
ಅಕ್ಷರ ಗಾತ್ರ

ರಾಯಚೂರು: ಬೆಳೆ ವಿಮೆ ಪರಿಹಾರ, ಮಳೆ ಹಾನಿ ಪರಿಹಾರ ನೀಡದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಶುಕ್ರವಾರ ಭಿಕ್ಷೆ ‌ಬೇಡಿ ಹಣ ಸಂಗ್ರಹಿಸಿ ರವಾನಿಸುವ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ತೀನ್ ಖಂದಿಲ್ ವೃತ್ತದಲ್ಲಿ ರೈತ ಸಂಘದ ಮುಖಂಡರು ಜೋಳಿಗೆ ಹಿಡಿದು ರಸ್ತೆ ಬದಿಯ ಅಂಗಡಿಗಳಿಗೆ ತೆರಳಿ ಭಿಕ್ಷೆ ಬೇಡಿದರು.

ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ‌ಪಾಟಿಲ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಆದರೆ ಸರ್ಕಾರ ಪರಿಹಾರ ನೀಡಿಲ್ಲ, ಕಳೆದ ಸೆಪ್ಟೆಂಬರ್ ತಿಂಗಳಿಂದ ನಿರಂತರವಾಗಿ ಮಳೆಯಿಂದಾಗಿ ಬೆಳೆಗಳು‌ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿವಾಳಿ‌ ಎದ್ದಿವೆ. ಪರಿಹಾರ ಧನ ನೀಡದೇ ಚೆಲ್ಲಾಟವಾಡುತ್ತಿವೆ. ಕೂಡಲೇ ಎಚ್ಚೆತ್ತು ಪರಿಹಾರ‌ ನೀಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ‌ ಮತ್ತಿತರರು‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT