ಬುಧವಾರ, ಏಪ್ರಿಲ್ 14, 2021
24 °C

ರೈತವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿ ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ಹೋರಾಟದ ಬಿತ್ತಿಪತ್ರಗಳ ಬಿಡುಗಡೆಗೊಳಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕೃಷಿ ಭೂಮಿಯನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಒಪ್ಪಿಸುವ ರಾಜ್ಯ ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು. ರೈತ ವಿರೋಧಿ ಜಾನುವಾರು ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು. ಉದ್ಯೋಗ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೆರವು ಘೋಷಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್ ಸ್ವಾಮಿನಾಥನ್ ಶಿಫಾರಸು ಅನ್ವಯ ಉತ್ಪಾದನಾ ವೆಚ್ಚದ ಮೇಲೆ ಶೇ 50ರಷ್ಟಯ ಲಾಭಾಂಶ ಸೇರಿಸಿ ಕನಿಷ್ಠ ಬೆಂಬಲ ಬೆಲೆ ಎಂಎಸ್‍ಪಿ ಖಾತರಿ ಮಾಡುವ ಕಾನೂನನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಂಗೀಕರಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಮುಖಂಡರಾದ ಮಾರೆಪ್ಪ ಹರವಿ, ರಾಮಬಾಬು, ಭಾರದ್ವಾಜ, ಬಸವರಾಜ ಗಾರಲದಿನ್ನಿ, ನರಸಪ್ಪ, ಗುರುರಾಜ್, ಶ್ರೀನಿವಾಸ ಕೊಪ್ಪರ, ಕೆ.ತಿಮ್ಮಪ್ಪ, ಆಂಜನೇಯ, ವಿರುಪಮ್ಮ, ವಿಷ್ಣುವರ್ಧನರೆಡ್ಡಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು