ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವ ಶ್ರೀರಾಮುಲು ಭೇಟಿ

ಪಾಮನಕಲ್ಲೂರು (ಕವಿತಾಳ): 5ಎ ನಾಲೆ ನಿರ್ಮಾಣಕ್ಕೆ ಆಗ್ರಹಿಸಿ ಪಾಮನಕಲ್ಲೂರಿನಲ್ಲಿ ರೈತರು ಮತ್ತು ಸಂಯಕ್ತ ಹೋರಾಟ ವೇದಿಕೆ ಪ್ರತ್ಯೇಕವಾಗಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಬಿ.ಶ್ರೀರಾಮುಲು ಈಚೆಗೆ ಭೇಟಿ ನೀಡಿ ರೈತರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, ‘ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿದ್ದರೂ ಕಳೆದ ಮೂರು ಚುನಾವಣೆಗಳಲ್ಲಿ ಕ್ಷೇತ್ರದ ಜನರು ಪ್ರತಾಪಗೌಡ ಪಾಟೀಲರನ್ನು ಬೆಂಬಲಿಸಿದ್ದಾರೆ. 5ಎ ನಾಲೆ ಜಾರಿ ವಿಷಯದಲ್ಲಿ ಅವರು ಸ್ಪಂದಿಸದ ಕಾರಣ ರೈತ ವರ್ಗಕ್ಕೆ ನೋವಾಗಿದೆ. ತಾಂತ್ರಿಕ ಸಮಸ್ಯೆಯ ನೆಪವೊಡ್ಡಿ ನಾಲೆ ನಿರ್ಮಾಣದ ಬಗ್ಗೆ ಕಾಳಜಿ ವಹಿಸದಿರುವುದು ರೈತರಲ್ಲಿ ಬೇಸರ ಮೂಡಿಸಿದೆ’ ಎಂದರು.
ಸಚಿವ ಶ್ರೀರಾಮುಲು ಮಾತನಾಡಿ, ‘ಕ್ಷೇತ್ರದಲ್ಲಿ ಮುಖ್ಯ ಮಂತ್ರಿಗಳು ಪ್ರಚಾರ ಕೈಗೊಳ್ಳಲಿದ್ದು ಅವರಿಗೆ ಮಾಹಿತಿ ನೀಡುವ ಮೂಲಕ 5 ಎ ನಾಲೆ ನಿರ್ಮಾಣ ಕುರಿತು ರೈತರ ಬೇಡಿಕೆ ಬಗ್ಗೆ ಮನವರಿಕೆ ಮಾಡಲಾಗುವುದು’ ಎಂದರು.
5 ಎ ನಾಲೆ ಸಂಯುಕ್ತ ಹೋರಾಟ ಸಮಿತಿಯ ಸಂಚಾಲಕ ಆರ್.ಮಾನಸಯ್ಯ ಮತ್ತು ಪ್ರತಾಪಗೌಡ ಪಾಟೀಲ್ ಮಾತನಾಡಿದರು.
ನಾಗಪ್ಪ ತಳವಾರ, ಆದೇಶ ನಗನೂರು, ಮೌಲಪ್ಪ, ತಿಪ್ಪಣ್ಣ ಮತ್ತು ರೈತರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.