ಕೊನೆ ಭಾಗಕ್ಕೆ ನೀರು ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಾಳೆ

7

ಕೊನೆ ಭಾಗಕ್ಕೆ ನೀರು ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಾಳೆ

Published:
Updated:

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನೀರಿನ ಕಳ್ಳತನ ತಡೆಗಟ್ಟಿ ಕೊನೆಯ ಭಾಗಕ್ಕೆ ನೀರು ತಲುಪಿಸಲು ಒತ್ತಾಯಿಸಿ ಆಗಸ್ಟ್‌ 6ರಂದು ಮಾನ್ವಿಯಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳೆರಡು ತುಂಬಿ ಹರಿಯುತ್ತಿದ್ದರೂ, ರೈತರ ಹೊಲಗಳಿಗೆ ನೀರು ಒದಗಿಸಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಮಳೆಯ ಅಭಾವದಿಂದ ಬರ ಪರಿಸ್ಥಿತಿ ಎದುರಾಗಿದ್ದರೂ ಜಿಲ್ಲಾಡಳಿತ ಸಮಸ್ಯೆ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗದಲ್ಲಿ ನೀರಿನ ಕಳ್ಳತನದ ಬಗ್ಗೆ ಹಲವು ಬಾರಿ ದೂರು ನೀಡಿದರೂ, ಯಾವುದೇ ಕ್ರಮ ಜರುಗಿಸಿಲ್ಲ. ಗಣೇಕಲ್ ಜಲಾಶಯ ತುಂಬಿಸಿಕೊಳ್ಳಲು ನಿಷೇಧಾಜ್ಞೆ ಜಾರಿಗೊಳಿಸುವ ಜಿಲ್ಲಾಡಳಿತ ರೈತರ ಹೊಲಗಳಿಗೆ ನೀರೊದಗಿಸಲು ಆಸಕ್ತಿ ತೋರುತ್ತಿಲ್ಲ. ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಬಿಟ್ಟ ನಂತರ ದುರಸ್ತಿ ಕಾಮಗಾರಿ ಹೆಸರಿನಲ್ಲಿ ಹಣ ಲೂಟಿ ಮಾಡಲು ಮುಂದಾಗಿದ್ದರೂ ಯಾರೊಬ್ಬರೂ ಕ್ರಮ ವಹಿಸುತ್ತಿಲ್ಲ ಎಂದು ದೂರಿದರು.

ಜಿಲ್ಲೆಯಲ್ಲಿ ಬೆಳೆ ವಿಮೆ ಮಾಡಿಸಿದರೂ ಪರಿಹಾರ ದೊರೆತಿಲ್ಲ. ಪರಿಹಾರದ ವಿಷಯದಲ್ಲಿ ತಾಂತ್ರಿಕ ಕಾರಣಗಳನ್ನು ಹೇಳಲಾಗುತ್ತಿದೆ. ಆದರೆ, ಸಮಸ್ಯೆ ಪರಿಹರಿಸುತ್ತಿಲ್ಲ. ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ಕಾರ್ಯ ಆರಂಭಿಸಬೇಕು ಎಂದು ಆಗ್ರಹಿಸಿದರು.

ಸೂಗೂರಯ್ಯ ಸ್ವಾಮಿ, ದೊಡ್ಡ ಬಸನಗೌಡ, ಜಯಪ್ಪಸ್ವಾಮಿ ಉಡಮಗಲ್, ಬಸವರಾಜಪ್ಪ, ಈರಪ್ಪಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !